ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ “ಬಾಲಿಕಾ ಜಾಗೃತಿ ಅಭಿಯಾನ”

Date:

ಮಂಗಳೂರು: ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಮತ್ತು ಲೋಬೋ ಫೌಂಡೇಶನ್ (ರಿ) ಜಂಟಿ ಆಶ್ರಯದಲ್ಲಿ, ಜುಲೈ ತಿಂಗಳ ಪೂರ್ತಿ ಮಂಗಳೂರಿನ ವಿವಿಧ ಹೋಬಳಿ ಮಟ್ಟದ ಶಾಲೆಗಳಲ್ಲಿ “ಬಾಲಿಕಾ ಜಾಗೃತಿ ಅಭಿಯಾನ”*ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಚಲಿತ ಚಾರಿಟೇಬಲ್ ಟ್ರಸ್ಟ್(ರಿ) ಕಾರ್ಯದರ್ಶಿ ಹನಿಷಾ ಸವಾದ್ ಹೇಳಿದರು.

ಅವರು ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಇಂದಿನ ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿಯಲ್ಲಿ ಹೆಣ್ಣುಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಹಾಗೂ ಮಾನಸಿಕ ಸ್ಥೈರ್ಯಕ್ಕೆ ಸಂಬಂಧಿಸಿದ ಸವಾಲುಗಳು ಹೆಚ್ಚಾಗುತ್ತಿವೆ. ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ, ಸೈಬರ್ ಅಪರಾಧಗಳು, ಪ್ರೀತಿ-ಪ್ರೇಮದ ಹೆಸರಿನಲ್ಲಿ ನಡೆಯುವ ವಂಚನೆಗಳು, ಪರೀಕ್ಷಾ ಒತ್ತಡದಿಂದ ಉಂಟಾಗುವ ಆತ್ಮಹತ್ಯೆಗಳು ಹಾಗೂ ವಿವಿಧ ರೀತಿಯ ಶೋಷಣೆಯಿಂದ ಮಕ್ಕಳನ್ನು ರಕ್ಷಿಸುವ ಅಗತ್ಯ ಅತ್ಯಂತ ಮಹತ್ವದ್ದಾಗಿದೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲೆ ಮಾನಸ ಹೆಗ್ಡೆ ಮಾತನಾಡಿ ಈ ಅಭಿಯಾನದ ಮೂಲಕ ಹೆಣ್ಣುಮಕ್ಕಳಿಗೆ ಆರೋಗ್ಯ, ಶಿಕ್ಷಣ, ಕಾನೂನು ಅರಿವು, ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ, ಸೈಬರ್ ಸುರಕ್ಷತೆ ಹಾಗೂ ಜೀವನ ಕೌಶಲ್ಯಗಳ ಕುರಿತು ಸಮಗ್ರ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುವುದು. ಪ್ರಸಿದ್ಧ ವೈದ್ಯರು, ಉನ್ನತ ನ್ಯಾಯವಾದಿಗಳು ಹಾಗೂ ಅನುಭವಿ ಶಿಕ್ಷಣ ತಜ್ಞರು ವಿದ್ಯಾರ್ಥಿನಿಯರೊಂದಿಗೆ ನೇರ ಸಂವಾದ ನಡೆಸಿ, ಅವರಲ್ಲಿರುವ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ ಎಂದು ಹೇಳಿದರು‌.

ಸುದ್ದಿಗೋಷ್ಠಿಯಲ್ಲಿ ಲೋಬೋ ಫೌಂಡೇಶನ್(ರಿ) ಸಂಸ್ಥಾಪಕ ಜ್ವಾನ್ ವಿಲ್ಸನ್ ಲೋಬೋ, ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ) ಸಂಸ್ಥಾಪಕಿ ಅಧ್ಯಕ್ಷ ಡಾ.ಸಂಶದ್ ಕುಂಜತ್ತಬೈಲ್, ಸಮಾಜಕಾರ್ಯ ಮತ್ತು ಶಿಕ್ಷಣ ತಜ್ಞೆ ಡಾ.ಅನುರಾಧ ಶೆಟ್ಟಿ ಹಾಗೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು: ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು: ರಾಜಕೀಯವಾಗಿ ತಮ್ಮ ವೈಯುಕ್ತಿಕ ಸಾಮರ್ಥ್ಯದ ಜೊತೆಗೆ ಧಾರ್ಮಿಕ ನಂಬಿಕೆಯ ಶಕ್ತಿಯ...

“ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್? 19 ಸಾವಿರ ಮಹಿಳೆಯರಿಗೆ ಒಂದೇ ಬ್ಯಾಂಕ್ ಖಾತೆ, ಸಿಎಜಿ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶಗಳು!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಅಕ್ರಮಗಳು...

ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ಹೋರಾಟಕ್ಕೆ ಎಸ್.ಡಿ.ಟಿ.ಯು ಸಂಪೂರ್ಣ ಬೆಂಬಲ

ಮಂಗಳೂರು: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ...

ನಾಳೆ (ಜೂನ್ 24) ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಬಂದ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುಂಬಾ ದಿನಗಳಿಂದ ಚಾಲಕರಿಗೆ ಅನ್ಯಾಯ...