ತಳಮಟ್ಟದ ನವೋದ್ಯಮ: ರಾಷ್ಟ್ರಪತಿಯಿಂದ ಪುರಸ್ಕಾರ ಸ್ವೀಕರಿಸಿದ ಅನುಷಾ ಪ್ರಜ್ವಲ್ ಆಚಾರ್

Date:

ಮೂಡುಬಿದಿರೆ: ರಾಷ್ಟ್ರಮಟ್ಟದಲ್ಲಿನ ತಳಮಟ್ಟದ ನಾವೀನ್ಯತೆಯ ಕೊಡುಗೆಗಾಗಿ ನೀಡಲಾಗುವ 2026 ನೇ ಸಾಲಿನ ತಳಮಟ್ಟದ ನವೋದ್ಯಮ ಗೌರವಕ್ಕೆ ಪಾತ್ರರಾಗಿರುವ ಮೂಡುಬಿದಿರೆಯ ಅನುಷಾ ಪ್ರಜ್ವಲ್ ಆಚಾರ್ ಅವರು ದೆಹಲಿಯಲ್ಲಿ ನಡೆದ ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಗೌರವ ಸ್ವೀಕರಿಸಿದರು.

ರಾಷ್ಟ್ರಮಟ್ಟದಲ್ಲಿ ಕೊಡಮಾಡುವ ಈ ಗೌರವಕ್ಕೆ ದ.ಕ.ದಿಂದ ಆಯ್ಕೆಯಾಗಿದ್ದ ಇಬ್ಬರ ಪೈಕಿ ಅನುಷಾ ಒಬ್ಬರಾಗಿದ್ದಾರೆ. ಬಾಣಂತನ ಸಂದರ್ಭದಲ್ಲಿ ನೀಡುವ ಲೇಹಾದಿ ಔಷಧಿಯನ್ನು ಪರಂಪರೆಯ ಲೇಹ, ಉಪಚಾರದ ಆಹಾರವಾಗಿ ನಾವೀನ್ಯತೆಯೊಂದಿಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಣ್ಣ ಪ್ರಯತ್ನಕ್ಕೆ ಮುಂದಾದ ಅನುಷಾ ಆಚಾರ್ ಅವರು ಅದರಲ್ಲಿ ಯಶಸ್ಸನ್ನೂ ಕಂಡರು. ಅದಕ್ಕೆ ‘ಮಾವೇದಾಸ್’ ಎಂಬ ಹೆಸರನ್ನೂ ಇಷ್ಟು. ಅವರ ಮಾವೇದಾಸ್ ಭಾರತದ ನೀತಿ ಆಯೋಗದ ಅಟಲ್ ಇನ್ನೋವೇಶನ್ ಮಿಶನ್ ಕೊಡಮಾಡುವ ಈ ಪ್ರತಿಷ್ಠಿತ ಗೌರವಕ್ಕೆ ಆಯ್ಕೆಯಾಗಿತ್ತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಹಿತ ಹಲವರು ಉಪಸ್ಥಿತರಿದ್ದರು.

ಮೂಲತ: ಕುಂದಾಪುರದವರಾಗಿರುವ ಅನುಷಾ ಆಚಾರ್ ಬನ್ನಡ್ಕದ ಎಸ್.ಕೆ.ಎಫ್.ಮುಖ್ಯಸ್ಥ ರಾಮಕೃಷ್ಣ ಆಚಾರ್ ಅವರ ಪುತ್ರ ಪ್ರಜ್ವಲ್ ಆಚಾರ್ ಅವರ ಪತ್ನಿ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...