ಕೊಡಗಿನಲ್ಲಿ ಮದುವೆ ಹೇಸರಿನಲ್ಲಿ ದೈವಕ್ಕೆ ಅವಮಾನ ? ಹಿಂದೂ ಸಂಘಟನೆಗಳ ಆಕ್ರೋಶ

Date:


ಮಡಿಕೇರಿ: ಕೊಡಗು ಜಿಲ್ಲೆಯ ಎಮ್ಮೆಮಾಡು ಪರಿಸರದಲ್ಲಿ ನಡೆದ ಮುಸ್ಲಿಂ ಸಮುದಾಯದ ಮದುವೆ ಸಮಾರಂಭವೊಂದರಲ್ಲಿ, ತುಳುನಾಡಿನ ಪವಿತ್ರ ದೈವವನ್ನೇ ಹೋಲುವ ರೀತಿಯಲ್ಲಿ ಮದುಮಗನಿಗೆ ವೇಷ ಹಾಕಿ ಅತಿರೇಕದ ವರ್ತನೆ ತೋರಿರುವ ಘಟನೆ ಇದೀಗ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಮದುಮಗ ಮತ್ತು ಆತನ ಬೆಂಬಲಿಗರ ಈ ‘ಹುಚ್ಚಾಟ’ದ ವೀಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿವೆ.

ಮುಸ್ಲಿಂ ಸಮುದಾಯದಲ್ಲಿ ಮದುವೆ ದಿನದ ರಾತ್ರಿ ಮದುಮಗ ತನ್ನ ಸ್ನೇಹಿತರೊಂದಿಗೆ ಸೇರಿ ತಮಾಷೆಗಾಗಿ ಒಂದಷ್ಟು ವಿನೋದದ ಕಾರ್ಯಕ್ರಮಗಳನ್ನು ಮಾಡುವುದು ರೂಢಿ. ಆದರೆ ಎಮ್ಮೆಮಾಡಿನಲ್ಲಿ ನಡೆದ ಈ ವಿವಾಹದಲ್ಲಿ ಮದುಮಗನಿಗೆ ತುಳುನಾಡಿನ ದೈವದ ಕೋಲದ ಮಾದರಿಯಲ್ಲಿ ಮುಖ ಹಾಗೂ ಮೈಗೆ ಬಣ್ಣ ಬಳಿದು, ದೈವವನ್ನೇ ಅಣಕಿಸುವ ರೀತಿಯಲ್ಲಿ ಕುಳ್ಳಿರಿಸಿ ವಿಕೃತವಾಗಿ ವರ್ತಿಸಲಾಗಿದೆ.

ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಕೇವಲ ಹಿಂದೂ ಸಂಘಟನೆಗಳು ಮಾತ್ರವಲ್ಲದೆ, ಸ್ವತಃ ಮುಸ್ಲಿಂ ಸಮುದಾಯದ ಅನೇಕರು ಈ ನಡೆಯನ್ನು ಖಂಡಿಸಿದ್ದಾರೆ. “ಇಂತಹ ವರ್ತನೆಗಳು ಸಮಾಜದ ಶಾಂತಿ ಕದಡುತ್ತವೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತವೆ” ಎಂದು ಸಮುದಾಯದ ಹಿರಿಯರು ಆಡಿಯೋಗಳ ಮೂಲಕ ಅಸಮಾಧಾನ ಹೊರಹಾಕುತ್ತಿದ್ದಾರೆ.

ಕೊಡಗಿನಲ್ಲಿ ಈ ಘಟನೆ ಜಿಲ್ಲಾಡಳಿತಕ್ಕೆ ಮತ್ತು ಪೋಲಿಸ್ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.

ತುಳುನಾಡಿನ ದೈವಾರಾಧನೆಯನ್ನು ಅಣಕಿಸಿದ ಮದುಮಗ ಮತ್ತು ತಂಡದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗುತ್ತಿದ್ದು, ಸಾರ್ವಜನಿಕ ಆಕ್ರೋಶಿತರಾಗಿ ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ತರುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...