ಹುಬ್ಬಳ್ಳಿ: ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ

Date:

ಹುಬ್ಬಳ್ಳಿ, 15-11-2028: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಅಬ್ದುಲ್ ಹನ್ನಾನ್ ರವರು ಮುಂಬರುವ ಚುನಾವಣೆಗಳ ತಯಾರಿ, ಸಾಮಾಜಿಕ ಸಮಸ್ಯೆಗಳ ಗುರುತುಪಡಿಸುವುದು ಮತ್ತು ಅವುಗಳಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ವಿಷಯಗಳನ್ನು ಪ್ರಸ್ತಾಪಿಸಿ ಚರ್ಚಿಸಿದರು. ಪಕ್ಷವನ್ನು ಬಲಪಡಿಸುವುದು, ಬೂತ್ ಮಟ್ಟದ ಚಟುವಟಿಕೆಗಳನ್ನು ವೇಗಗೊಳಿಸುವುದು ಮತ್ತು ಜನಸಂಪರ್ಕ ಕಾರ್ಯಕ್ರಮಗಳನ್ನು ಹೆಚ್ಚಿಸುವ ಕುರಿತು ಮಾರ್ಗದರ್ಶನ ನೀಡಿದರು.

ಉತ್ತರ ಕರ್ನಾಟಕದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ತಮ್ಮ ತಮ್ಮ ಜಿಲ್ಲೆಗಳ ಪಕ್ಷದ ಕಾರ್ಯಗಳ ಪ್ರಗತಿ ಹಾಗೂ ಎದುರಿರುವ ರಾಜಕೀಯ ಸವಾಲುಗಳನ್ನು ಸಭೆಯಲ್ಲಿ ಹಂಚಿಕೊಂಡರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹೀದ್ ಪಾಷಾ ರವರು ಪರಿಣಾಮಕಾರಿ ಕಾರ್ಯವೈಖರಿ, ಜನಸಂಪರ್ಕ ಮತ್ತು ವಿಷಯಾಧಾರಿತ ಚಳುವಳಿಗಳ ಮಹತ್ವವನ್ನು ಒತ್ತಿಹೇಳಿದರು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟು ಪಕ್ಷದ ಚಟುವಟಿಕೆಗಳನ್ನು ಇನ್ನಷ್ಟು ವೇಗಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಸಭೆಯ ಅಂತ್ಯದಲ್ಲಿ, ಪಕ್ಷದ ಧೈಯವನ್ನು ಏಕತೆ, ಶಿಸ್ತು ಮತ್ತು ಸಮರ್ಪಣೆಯೊಂದಿಗೆ ಮುನ್ನಡೆಸುವ ಸಂಕಲ್ಪ ವ್ಯಕ್ತಪಡಿಸಲಾಯಿತು. ರಾಜ್ಯ ಕಾರ್ಯದರ್ಶಿ ಅಪ್ಸರ್ ಕೆ.ಆರ್.ನಗರ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...