“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Date:

ಮಂಗಳೂರು: ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ತಯಾರಾದ ರಿಷಬ್ ಶೆಟ್ಟಿ ನಿರ್ದೇಶನದ “ಕಾಂತಾರ” ಸಿನಿಮಾದ ಬಗ್ಗೆ ಪರ ವಿರೋಧ ಚರ್ಚೆಯಾಗುತ್ತಿದ್ದು, ಸಿನಿಮಾದಲ್ಲಿ ಎಲ್ಲೂ ದೈವಗಳಿಗೆ ಅಪಚಾರ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿದರೆ ಚೆಂದ. ಸಿನಿಮಾದ ಉದ್ದಕ್ಕೂ ಎಲ್ಲೂ ದೈವಗಳ ನಿಂದನೆಯಾಗಿಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.ಕಾಂತಾರ ಸಿನಿಮಾ ಇಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಸಿನಿಮಾದ ಕುರಿತು ಅಪಸ್ವರ ಎದ್ದಿದೆ, ಪರ ವಿರೋಧ ಚರ್ಚೆಗಳು ನಡೆದಿದೆ. ದೈವ ನಂಬಿದವರ ಸ್ವತ್ತು. ದೈವ ಒಂದು ಜಾತಿಗೆ ಸೀಮಿತವಾದ ಸ್ವತ್ತಲ್ಲ. ಜಾತಿಮತಕ್ಕೆ ಮೀರಿದ ಸ್ವತ್ತು. ಕಾಂತಾರದಿಂದ ದೈವಭಕ್ತಿ ಹೆಚ್ಚಿದೆ. ಈ ಸಿನಿಮಾವನ್ನು ನಿರ್ದೇಶಿಸಿ ಪಾತ್ರ ನಿರ್ವಹಿಸಿರುವ ರಿಷಬ್ ಶೆಟ್ಟಿ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈ ನೆಲದ ಭಾಷೆಯ ಕಂಪನ್ನು ರಾಷ್ಟ್ರದೆಲ್ಲೆಡೆ ಪಸರಿಸಿದ್ದಾರೆ. ಸಿನಿಮಾದಿಂದ ದೈವಗಳ ಅವಹೇಳನ ಆಗಿಲ್ಲ. ಸಿನಿಮಾವನ್ನು ಸಿನಿಮಾದ ರೀತಿಯಲ್ಲೇ ನೋಡಿ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...