ಸಯ್ಯಿದ್ ಮದನಿ ಮಹಿಳಾ ಕಾಲೇಜು ಕಟ್ಟಡದ ಗೇಟ್ ಉದ್ಘಾಟನೆ ‌ಹಾಗೂ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Date:


ಉಳ್ಳಾಲ: ಅಭಿವೃದ್ಧಿ ನಮ್ಮ ಗುರಿ ಆಗಿದ್ದು, ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣ ಪಡೆದು ಅಭಿವೃದ್ಧಿ ಕಡೆ ಹೆಜ್ಜೆ ಇಡಬೇಕು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು. ಅವರು ಉಳ್ಳಾಲ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಹಝ್ರತ್ ಸಯ್ಯಿದ್ ಮದನಿ ಮಹಿಳಾ ಕಾಲೇಜು ಕಟ್ಟಡದ ಗೇಟ್ ಉದ್ಘಾಟನೆ ‌ಹಾಗೂ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.


ವಿದ್ಯಾರ್ಥಿ ಜೀವನದಲ್ಲಿ ಒಂದು ಗುರಿ ಯನ್ನು ಇಟ್ಟುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಶಿಕ್ಷಣ ಮುಂದುವರಿಸಿ ಒಂದು ಹಂತಕ್ಕೆ ತಲುಪಲು ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು ಎಂದರು.
ಸಯ್ಯಿದ್ ಮಸೂದ್ ತಂಙಳ್ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸಗೈದು ದುಆ ನೆರವೇರಿಸಿದರು.ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.


ಈ ಕಾರ್ಯಕ್ರಮ ದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್,ದರ್ಗಾ ಮಾಜಿ ಅಧ್ಯಕ್ಷ ಹಂಝ, ಹಾಲಿ ಸದಸ್ಯ ಝೈನುದ್ದೀನ್ ಮೇಲಂಗಡಿ, ವಕ್ಫ್ ಅಧಿಕಾರಿ ಅಬೂಬಕ್ಕರ್ , ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್, ಕಾರ್ಯದರ್ಶಿ ಮುಸ್ತಫಾ, ಮಾಜಿ ಅಧ್ಯಕ್ಷ ಕಣಚೂರು ಮೋನು, ಚೆರೆ ಮೋನು, ಅಬ್ದುಲ್ ಖಾದರ್, ಅಬ್ಬಾಸ್ ಕೋಡಿ,ಝಿಯಾದ್ ತಂಙಳ್ ಮೊಯ್ದಿನ್ ಕಲ್ಲಾಪು, ಖಲೀಲ್, ಹಝ್ರತ್ ಸಯ್ಯಿದ್ ಮದನಿ ಮಹಿಳಾ ಕಾಲೇಜು ಪ್ರಾಂಶುಪಾಲ ರಸೂಲ್ ಖಾನ್,
ಅಲ್ತಾಫ್ ,ಚಾರಿಟೇಬಲ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಮತ್ತಿತರರು ಉಪಸ್ಥಿತರಿದ್ದರು. ಕೆ.ಏಮ್ ಕೆ ಮಂಜನಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...