ವಿಟ್ಲ: ಕರೈಯಲ್ಲಿ ಗೋವು ಸಾಗಾಟ ತಡೆದು, ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Date:

ವಿಟ್ಲ (ಫೆ. 27): ಗುರುವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ ಚನ್ನರಾಯ್ ಪಟ್ಟಣ ಕಡೆಯಿಂದ ಬಂಟ್ವಾಳ ತಾಲೂಕಿನ ಸಾಲೆತ್ತೂರು ಮೆದು ಪ್ರದೇಶದತ್ತ ಎರಡು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಕರೈ ಪ್ರದೇಶದಲ್ಲಿ ಅಡ್ಡಗಟ್ಟಿ, ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ಹರಿಯಪ್ಪ ನಾಯ್ಕ್ ಎಂಬ ವ್ಯಕ್ತಿಯ ಹೆಸರಿನಲ್ಲಿ ದಾಖಲೆ (ಬಿಲ್) ಮಾಡಿಸಿಕೊಂಡು KA 13 B 8178 ಸಂಖ್ಯೆಯ ಅಶೋಕ್ ಲೈಲ್ಯಾಂಡ್ ವಾಹನದಲ್ಲಿ ಚೇತನ್ ಹಾಗೂ ನವೀನ್ ಎಂಬವರು ಎರಡು ಗೋವುಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕುಡ್ತಮುಗೇರು ಸಂಘಪರಿವಾರದ ಕಾರ್ಯಕರ್ತರು ಕರೈ ಎಂಬಲ್ಲಿ ವಾಹನವನ್ನು ತಡೆದು ನಿಲ್ಲಿಸಿದರು.

ಸಂಘಪರಿವಾರದ ಕಾರ್ಯಕರ್ತರು ದಾಖಲೆಗಳ ಪರಿಶೀಲನೆ ನಡೆಸಿ, ಅನುಮಾನಾಸ್ಪದ ಪರಿಸ್ಥಿತಿ ಕಂಡುಬಂದ ಹಿನ್ನೆಲೆ ಪತ್ರಕರ್ತರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ವಾಹನವನ್ನು ವಶಕ್ಕೆ ಪಡೆದು, ಬಳಿಕ ವಿಟ್ಲ ಪೊಲೀಸರಿಗೆ ಒಪ್ಪಿಸಿದರು.

ಘಟನೆಯ ಬಗ್ಗೆ ಸ್ಥಳೀಯರಲ್ಲಿ ಚರ್ಚೆ ನಡೆಯುತ್ತಿದ್ದು, ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ತಿಳಿದುಬಂದಿದೆ. ಗೋವು ಸಾಗಾಟಕ್ಕೆ ಸಂಬಂಧಿಸಿದ ದಾಖಲೆಗಳು ಸರಿಯಾಗಿದೆಯೇ ಎಂಬುದರ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿವರಗಳು ತನಿಖೆಯ ನಂತರ ತಿಳಿಯಬೇಕಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...