
ಮಂಗಳೂರು: ಇತ್ತೀಚೆಗೆ ಚಿಕ್ಕಮಗಳೂರು ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಲಾಲುದ್ದೀನ್ ಹುಮೈದಿ ದೇರಳಕಟ್ಟೆ ಕಿನ್ಯ(27)ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಖಾಝಿ ಶೈಖುನಾ ಮಾಣಿ ಉಸ್ತಾದ್ ರವರ ಮಗಳ ಮಗ, ಜಲಾಲುದ್ದೀನ್ ಹುಮೈದಿ(27) ಇಂದು ಬುಧವಾರ ಬೆಳಿಗ್ಗೆ ಮಂಗಳೂರಿನ ದೇರಳಕಟ್ಟೆ ಏನೆಪೋಯ ಆಸ್ಪತ್ರೆಯಲ್ಲಿ ಮೃತರಾದರು.


