ಮೂಡಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Date:

ಮೂಡಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಆಶ್ರಯದಲ್ಲಿ ಫೆಬ್ರವರಿ 21ರಂದು ನಡೆಯಲಿರುವ ದ್ವಿತೀಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.

ಕಡಂದಲೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಸಮ್ಮೇಳನ ನಡೆಯಲಿದ್ದು, ಸಾಹಿತ್ಯಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಸುಚರಿತ ಶೆಟ್ಟಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪರಿಷತ್ತಿನ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ., ಕಾರ್ಯದರ್ಶಿ ಸದಾನಂದ ನಾರಾವಿ, ಸಂಘಟನಾ ಕಾರ್ಯದರ್ಶಿಗಳಾದ ಯತಿರಾಜ್ ಶೆಟ್ಟಿ ಮತ್ತು ಮಹಾದೇವ ಮೂಡುಕೊಣಾಜೆ, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಎನ್. ಕೆಂಬಾರೆ, ಉದಯ ಪೂಜಾರಿ, ರಶ್ಮಿ ರಾಜೇಶ್, ಸುಜಿತ್ ಅಮೀನ್, ರಾಕೇಶ್ ಪೂಜಾರಿ ಹಾಗೂ ಜಗದೀಶ್ ಪೂಜಾರಿ ಪೂಪಾಡಿಕಲ್ಲು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...

ಉಚಿತ ಟ್ಯೂಷನ್: ಸಮಾರೋಪ

ಉಚಿತ ಟ್ಯೂಷನ್: ಸಮಾರೋಪ ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ....

ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯ ಸುಜೀತ್ ಮಾಡೂರು 6ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ

ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ...