ಕೆ.ಎಂ.ಕೆ ಮಂಜನಾಡಿಯವರಿಗೆ ಸಂಘಟನಾ ಸ್ಪೂರ್ತಿ ಪ್ರಶಸ್ತಿ

Date:

ಉಳ್ಳಾಲ: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರು ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕರಾದ ಶ್ರೀಯುತ ಕೆ ಎಂ ಕೆ ಮಂಜುನಾಡಿಯವರು ಕಳೆದ 35 ವರ್ಷಗಳಿಂದ ಶಿಕ್ಷಕರ ಸಂಘಟನೆ ಸಮೇತ ತಾಲೂಕು ಜಿಲ್ಲೆ ರಾಜ್ಯದ ವಿವಿಧ ಸಂಘಟನೆಗಳಲ್ಲಿ, ತೊಡಗಿಸಿಕೊಂಡಿದ್ದು, ಇವರ ಸಂಘಟನಾ ಚಾತುರ್ಯವನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ಇವರು ಸಂಘಟನಾ ಸ್ಪೂರ್ತಿ 2026 ಪ್ರಶಸ್ತಿಯನ್ನು ನೀಡಿ ಗೌರವಿಸಿರುವರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮಹಾಸಮ್ಮೇಳನ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಡಾಕ್ಟರ್ ಯು ಟಿ ಖಾದರ್ ಫರೀದ್ ಹಾಜಿಯವರು ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಶಾಸಕರುಗಳು ಹಾಗೂ ರಾಜ್ಯದ ವಿವಿಧ ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಲಾರ್ ಮಸೀದಿ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಉಳ್ಳಾಲ: ಹರೇಕಳ ಗ್ರಾಮದಲ್ಲಿ ಹಿಂದೆ ಮಣ್ಣಿನ ರಸ್ತೆಯಾಗಿದ್ದ ಮಾರ್ಗಗಳೆಲ್ಲವೂ ಈಗ ಕಾಂಕ್ರೀಟ್...

ವಿಟ್ಲ: ಕರೈಯಲ್ಲಿ ಗೋವು ಸಾಗಾಟ ತಡೆದು, ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ವಿಟ್ಲ (ಫೆ. 27): ಗುರುವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ...

ಸೌದಿ ಅರೇಬಿಯಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಉಮ್ರಾ ಬಸ್ ಅಪಘಾತ; ಮೂವರು ಭಾರತೀಯರ ಮೃತ್ಯು; ಹಲವರಿಗೆ ಗಾಯ

ಜೆದ್ದಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಉಮ್ರಾ ಬಸ್ ಪಲ್ಟಿಯಾಗಿ ಅಪಘಾತ...

ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.27ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ...