ಕಲ್ಕಟ್ಟ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಸಮಾರೋಪ

Date:

ದೇರಳಕಟ್ಟೆ : ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದ್ರಸ ಕಲ್ಕಟ್ಟ ಇದರ ಆಶ್ರಯದಲ್ಲಿ 1500 ವರ್ಷದ ಮೀಲಾದುನ್ನಬಿ ಆಚರಣೆ ಪ್ರಯುಕ್ತ ಎರಡು ದಿನಗಳ ಕಾಲ ನಡೆದ ಮದ್ರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಶನಿವಾರ ನಡೆಯಿತು.
ಇಲ್ಯಾಸ್ ಜುಮಾ ಮಸೀದಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ ದುಆ ನೆರವೇರಿಸಿ ಧಾರ್ಮಿಕ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಬಹುಮಾನ ವಿತರಣೆ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಲ್ಯಾಸ್ ಜುಮಾ ಮಸೀದಿ ಅಧ್ಯಕ್ಷ ಮನ್ಸೂರ್ ಹಾಜಿ ನಾಟೆಕಲ್ ವಿಜೇತರಿಗೆ ಬಹುಮಾನ ವಿತರಿಸಿದರು.
ಹಾಜರಾತಿ, ಪರೀಕ್ಷೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ
ಸುಬಹಿ ನಮಾಝ್ ಗೆ ದಿನನಿತ್ಯ ಮಸೀದಿಗೆ ಬರುತ್ತಿದ್ದ ವಿದ್ಯಾರ್ಥಿಯನ್ನು ಗೌರವಿಸಲಾಯಿತು.
ಇಲ್ಯಾಸ್ ಜುಮಾ ಮಸೀದಿ ಖತೀಬ್ ಇಸ್ಹಾಕ್ ಸಖಾಫಿ ನಂದಾವರ,ರಿಫಾಯಿಯ್ಯ ಮದ್ರಸದ ಸದ್ ರ್ ಉಸ್ತಾದ್ ಶರೀಫ್ ಸ ಅದಿ,ಮುಅಲ್ಲಿಂಗಳಾದ ರಝಾಕ್ ಸ ಅದಿ, ಹಸನ್ ಸಅದಿ, ಸಿದ್ದೀಕ್ ಅಹ್ಸನಿ, ಇಸ್ಹಾಕ್ ಸಅದಿ, ಅವರನ್ನು ಈ ಸಂದರ್ಭದಲ್ಲಿ ಸಮಿತಿ ವತಿಯಿಂದ ಗೌರವಿಸಲಾಯಿತು.
ಈ ಕಾರ್ಯಕ್ರಮ ದಲ್ಲಿ ಮುಅಲ್ಲಿಂ ಇಸ್ಹಾಕ್ ಸಅದಿ , ರಝಾಕ್ ಸ ಅದಿ,ಹಸನ್ ಸಅದಿ, ಸಿದ್ದೀಕ್ ಅಹ್ಸನಿ, ಗೌರವ ಅಧ್ಯಕ್ಷ ಪೊಡಿಯಬ್ಬ ಹಾಜಿ, ಪ್ರಧಾನ ಕಾರ್ಯದರ್ಶಿ ಮೋನು ಕಲ್ಕಟ್ಟ, ಉಪಾಧ್ಯಕ್ಷ ಮುಹಮ್ಮದ್ ಕಂಡಿಕ, ಮದ್ರಸ ಉಸ್ತುವಾರಿ ಮೊಯ್ದಿನ್ ಮೋನು, ಕೋಶಾಧಿಕಾರಿ ನಾಸೀರ್, ಕಾರ್ಯದರ್ಶಿ ಹಸೈನಾರ್ ತಟ್ಲ, ರಝಾಕ್ ಕಲ್ಕಟ್ಟ, ಅಬ್ದುಲ್ ರಹ್ಮಾನ್ ರಝ್ವಿ, ಪತ್ರಕರ್ತ ಬಶೀರ್ ಕಲ್ಕಟ್ಟ ಮತ್ತಿತರರು ಉಪಸ್ಥಿತರಿದ್ದರು.
ಸದ್ ರ್ ಉಸ್ತಾದ್ ಶರೀಫ್ ಸ ಅದಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಕಾರ್ಯದರ್ಶಿ ಮೊಹಮ್ಮದ್ ಮಾಸ್ಟರ್ ಸ್ವಾಗತಿಸಿದರು.
ಮದ್ರಸ ಉಸ್ತುವಾರಿ ಮೊಯ್ದಿನ್ ಮೋನು ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...