ಮೂರು ಕಡೆ ಕಂಬಳ ನಡೆಸಲು ಹೈಕೋಟ್ ಗ್ರೀನ್ ಸಿಗ್ನಲ್ : ರಾಜ್ಯ ಕಂಬಳ ಅಸೋಸಿಯೇಷನ್ ಗೆ ಜಯ

Date:

ಮೂಡುಬಿದಿರೆ : ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ
ಕಂಬಳ ನಡೆಸಲು ಹೈ ಕೋಟ್೯ ಗ್ರೀನ್ ಸಿಗ್ನಲ್ ನೀಡಿದೆ.ಈ ಮೂಲಕ ಸರ್ಕಾರ ಅಧೀನದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ.

ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ.ದೇವಿ ಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕಂಬಳ ಕ್ಷೇತ್ರದಲ್ಲಿ ಸಂತಸದ ಕ್ಷಣ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಕರ್ನಾಟಕ ಸರ್ಕಾರ ಅಡ್ವಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮದೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.

ಪ್ರವಾಸೋದ್ಯಮಕ್ಕೆ ಇದು ಉತ್ತೇಜನ ನೀಡುತ್ತದೆ. ಸರ್ಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ ಎಂದು ಮಾಹಿತಿ ನೀಡಿದರು.
ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಆದರೆ ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ.

ಕಂಬಳ ಅಸೋಸಿಯೇಷನ್ ನ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಶಿಯೇಶನ್ ಗೆ ಸಂದ ಜಯ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...