ಕಾಸರಗೋಡು ಕನ್ನಡಿಗರ ಶೈಕ್ಷಣಿಕ ಹಾಗೂ ಉದ್ಯೋಗ ಸಂಬಂಧಿತ ಸಮಸ್ಯೆಗಳ ಬಗ್ಗೆ ಕೇರಳ ಸಿಎಂ ಭೇಟಿ- ಮನವಿ ಸಲ್ಲಿಸಿದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ.

Date:

ಕಾಸರಗೋಡು: ದಿನಾಂಕ:16.09.2025ರಂದು ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಪಿಣರಾಯಿ ವಿಜಯನ್ ಇವರನ್ನು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ, ಶ್ರೀ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕರಾದ ಶ್ರೀ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್, ಶ್ರೀ ಎ.ಆರ್. ಸುಬ್ಬಯ್ಯ ಕಟ್ಟೆ, ಸದಸ್ಯರು, ಗಡಿ ಪ್ರಾಧಿಕಾರ ಹಾಗೂ ಇತರೆ ಕನ್ನಡಿಗರು ಜೊತೆಗಿದ್ದರು ಹಾಗೂ ಬದಿಯಡ್ಕದ ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಸಾಂಸ್ಕೃತಿಕ ಭವನದ ಉದ್ಘಾಟನೆಗೆ ಕೇರಳದ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಯಿತು. ಇದೇ ಸಂದರ್ಭದಲ್ಲಿ ಕೇರಳ ವಿಧಾನಸಭೆಯ ಸ್ಪೀಕರ್ ರಾದ ಶ್ರೀ ಶಂಶೀರ್ ಅವರನ್ನು ಹಾಗೂ ಕೇರಳ ವಿಧಾನಸಭೆಯ ವಿರೋದ ಪಕ್ಷದ ನಾಯಕರಾದ ಶ್ರೀ ವಿ ಡಿ ಸತೀಶನ್ ರವರನ್ನು ಭೇಟಿ ಮಾಡಲಾಯಿತು. ಕಾಸರಗೋಡು ಕನ್ನಡಿಗರ ಪ್ರಮುಖ ಬೇಡಿಕೆಗಳು.

1.ರಾಷ್ಟ್ರೀಯ ಹೆದ್ದಾರಿ/ ರೇಲ್ವೆ ಸ್ಟೇಷನ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ.

2.ಕೇರಳದ ನೇಮಕಾತಿಗಳಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ನಿಯಮಾನುಸಾರ ಮೀಸಲಾತಿ.

3.ರೇಶನ್‌ ಕಾರ್ಡ್‌/ಮತದಾರರ ಗುರುತಿನ ಚೀಟಿಗಳಲ್ಲಿ ಕನ್ನಡ ಭಾಷೆ ಅಳವಡಿಕೆ.

4.ಬದಿಯಡ್ಕದ ಕಯ್ಯಾರ ಕಿಯ್ಯಣ್ಣ ರೈ ಕನ್ನಡ ಭವನಕ್ಕೆ ರಸ್ತೆ ಸಂಪರ್ಕ.

5.ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ.

6. ಕಾಸರಗೋಡು ಜಿಲ್ಲೆಗಳಿಗೆ ಕಡ್ಡಾಯವಾಗಿ ಕನ್ನಡ ಶಿಕ್ಷಕರ ನೇಮಕ.

7.ಪ್ರಭಾಕರನ್‌ ಕಮಿಟಿ ವರದಿ ಅನುಷ್ಠಾನ.

8. ಕಾಸರಗೋಡು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಇತ್ಯಾದಿ ಮನವಿ ಪತ್ರ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...