ಕಾವೂರು ಪ್ರಚಲಿತ ಚಾರಿಟೇಬಲ್ ಟ್ರಸ್ಟ್(ರಿ) ಮಂಗಳೂರು: ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Date:

ಕಾವೂರು: ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರು ಇದರ ವತಿಯಿಂದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವು ಜ್ಯೋತಿನಗರದಲ್ಲಿ ನಡೆಯಿತು.

ಕಾವೂರು ಪೋಲೀಸ್ ಠಾಣಾ ಸಬ್ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ ಬಿರಂದಾರ್ ರವರು ಯುವ ಜನತೆಯು ಮಾದಕ ವಸ್ತುಗಳಿಂದ ದೂರವಿದ್ದರೆ ಉಜ್ವಲ ಭವಿಷ್ಯವನ್ನು ರೂಪಿಸಬಹುದು.ಮಾದಕ ವ್ಯಸನ ಮುಕ್ತ ನಗರವನ್ನು ನಿರ್ಮಿಸುವುದರಲ್ಲಿ ಪ್ರತಿಯೊಬ್ಬರ ಪಾತ್ರ ಬಹಳ ಮುಖ್ಯವಾದದ್ದು ಎಂದು ಹೇಳಿದರು.

ನಿಕಟಪೂರ್ವ ಸದಸ್ಯರು ಮ.ನ.ಪಾ ಶರತ್ ಕುಮಾರ್,ಸಹಾಯಕ ಪ್ರಾಧ್ಯಪಕಿ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಡಾ.ಅನುರಾಧ ಶೆಟ್ಟಿ,ನಂದಿನಿ ಮಹಿಳಾ ಮಂಡಲ ಕುಂಜತ್ತಬೈಲ್ ನ ಅಧ್ಯಕ್ಷೆ ಗೀತಾ ಶೇಖರ್,ಟ್ರಸ್ಟ್ ನ ಸದಸ್ಯರು ಹಾಗೂ ಸೇವಕ-ಮಹಿಳಾ ಗೃಹ ಕಾರ್ಮಿಕರ ಸಬಲೀಕರಣ ಯೋಜನೆ ಮಂಗಳೂರು ಇದರ ಸದಸ್ಯರು ಉಪಸ್ಥಿತಿಯಿದ್ದರು.

ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷೆ ಡಾ.ಸಂಸದ್ ಕುಂಜತ್ತಬೈಲ್ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶನಿ ನಿಲಯ, ಮಂಗಳೂರು ಇದರ ವಿದ್ಯಾರ್ಥಿಗಳು ಮಾದಕ ವ್ಯಸನ ಮುಕ್ತ ಜಾಗೃತಿಯ ಬೀದಿ ನಾಟಕವನ್ನು ಪ್ರದರ್ಶಿಸಿದರು.

ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಹನಿಷ ಸವಾದ್ ನಿರೂಪಿಸಿದರು.ಟ್ರಸ್ಟೀ ಕವಿತಾ ಶ್ರೀರಾಮ್ ಸ್ವಾಗತಿಸಿದರು. ಗ್ಲೇಡ್ಸನ್ ಅರಾನ್ಹಾರವರು ವಂದಿಸಿದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...