ಕೊಳತ್ತಮಜಲು ಅವರಿಗೆ ಕದ್ರಿ ಕಂಬಳ ಗುತ್ತು ಪ್ರಶಸ್ತಿ

Date:

ಮಂಗಳೂರು: ಪಾವಂಜೆ ಮೇಳದ ಕಲಾವಿದ, ಪ್ರಬಂಧಕ “ಯಕ್ಷ ರಾಮ ” ಬಿರುದಾಂಕಿತ ಮಾಧವ ಬಂಗೇರ ಕೊಳತ್ತಮಜಲು ಅವರಿಗೆ ಕದ್ರಿ ದೇವಸ್ಥಾನದಲ್ಲಿ ನಡೆದ ಕದ್ರಿ ಯಕ್ಷ ಬಳಗದ ಪಾವಂಜೆ ಮೇಳದ ಸೇವೆ ಆಟದ ವೇದಿಕೆಯಲ್ಲಿ ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ ನೀಡಿ ಸನ್ಮಾನಿಸ ಲಾಯಿತು.

ಹಿರಿಯ ವೈದ್ಯ ಡಾ. ಜಯಶಂಕರ್ ಮಾರ್ಲ, ಉದ್ಯಮಿ ಜಿತೇಂದ್ರ ಕೊಟ್ಟಾರಿ, ದಿವಾಕರ ಶೆಟ್ಟಿ, ಯಕ್ಷಗಾನ ಅಕಾಡೆಮಿ ಸದಸ್ಯ ವಿಜಯ ಕುಮಾರ್ ಮೊಯ್ಲೊಟ್ಟು, ಸಂಜಯ್ ಕುಮಾರ್ ಗೋಣಿಬೀಡು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಕದ್ರಿ ಯಕ್ಷ ಬಳಗದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅವರು ಕದ್ರಿ ಕಂಬಳ ಗುತ್ತು ಬಾಲಕೃಷ್ಣ ಶೆಟ್ಟಿ ಅವರ ಸ್ಮರಣೆ ಮಾಡಿದರು.

ಅರ್ಚಕ ಕದ್ರಿ ರವಿ ಅಡಿಗ ಅವರು ಶನೀಶ್ವರನ ಕಥೆಯ “ಛಾಯಾ ನಂದನ” ನೂತನ ಪ್ರಸಂಗದ ಮೊದಲ ಪ್ರದರ್ಶನ ಆಕರ್ಷಣೀಯವಾಗಿ ಮೂಡಿ ಬಂದಿದ್ದು ಸಾವಿರಾರು ಪ್ರದರ್ಶನಗಳನ್ನು ಕಾಣುವಂತಾಗಲಿ ಎಂದು ಹರಸಿದರು.ಪ್ರಸಂಗ ಕರ್ತ ಕದ್ರಿ ನವನೀತ ಶೆಟ್ಟಿ ಅವರು ರಚಿಸಿದ “ಛಾಯಾ ನಂದನ “ಕೃತಿ ಯ ಬಗ್ಗೆ ಮಾತನಾಡಿದ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರು ಕೊಳತ್ತಮಜಲು ಅವರನ್ನು ಅಭಿನಂದಿಸಿದರು.ಪ್ರದೀಪ್ ಆಳ್ವ ಕದ್ರಿ ಅವರು ಸನ್ಮಾನಿತರನ್ನು ಅಭಿನಂದಿಸಿದರು.

ಬಳಗದ ತಾರಾನಾಥ್ ಶೆಟ್ಟಿ ಬೋಳಾರ, ಲೀಲಾಕ್ಷ ಬಿ ಕರ್ಕೇರ, ಶಿವಪ್ರಸಾದ್ ಎನ್ ಪ್ರಭು, ಗೋಕುಲ್ ಕದ್ರಿ, ಕೃಷ್ಣ ಶೆಟ್ಟಿ ತಾರೆಮಾರ್, ಜಯಶೀಲ ಅಡ್ಯoತಾಯ, ಹರೀಶ್ ಕುಮಾರ್ ಚಿತ್ರಾಪುರ, ಎಲ್ಲೂರು ರಾಮಚಂದ್ರ ಭಟ್, ಮಹೇಶ್ ಪಾಟೀಲ್ ಉಪಸ್ಥಿತರಿದ್ದರು. ಪುರುಷೋತ್ತಮ ಭಂಡಾರಿ ಅಡ್ಯಾರ್ ನಿರೂಪಿಸಿದರು. ಸುಧಾಕರ ರಾವ್ ಪೇಜಾವರ ಧನ್ಯವಾದ ಸಮರ್ಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...