ತಂತ್ರಜ್ಞಾನ ಬಳಕೆಯ ನಡುವೆ ಚಿಂತನಾ ಶಕ್ತಿ ಕಾಪಾಡಿಕೊಳ್ಳಿ: ಅತುಲ್ ಭಟ್

Date:


ಮೂಡಬಿದಿರೆ: ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರದಲ್ಲೇ ಅಪಾರ ಮಾಹಿತಿಯಿದ್ದು, ಅದನ್ನು ಅರಿಯಲು ಸದಾ ಮೊಬೈಲ್ ಅಥವಾ ಇಂಟರ್‌ನೆಟ್ ಅವಶ್ಯಕತೆಯಿಲ್ಲ. ವಿದ್ಯಾರ್ಥಿಗಳು ತಮ್ಮ ಸುತ್ತಲಿನ ವಸ್ತುಗಳನ್ನು ಗಮನಿಸುವ ಮೂಲಕವೇ ಬಹಳಷ್ಟು ಕಲಿಯಬಹುದು ಎಂದು ಮಾಹೆಯ ಸೌರ ಭೌತಶಾಸ್ತ್ರ ಸಂಶೋಧಕ ಅತುಲ್ ಭಟ್ ಹೇಳಿದರು.


ಆಳ್ವಾಸ್ ಶಾಲೆ ಆಯೋಜಿಸಿದ್ದ ‘ಖಗೋಳಶಾಸ್ತ್ರ ಬೇಸಿಗೆ ಶಿಬಿರ ೨೦೨೬’ ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನವನ್ನು ಬಳಸುವ ವೇಳೆ ವಿದ್ಯಾರ್ಥಿಗಳು ತಮ್ಮ ಚಿಂತನಾ ಶಕ್ತಿ ಮತ್ತು ನೆನಪಿನ ಸಾಮರ್ಥ್ಯವನ್ನು ಕಳೆದುಕೊಳ್ಳಬಾರದು. ಹಿಂದಿನ ದಿನಗಳಲ್ಲಿ ಮೊಬೈಲ್‌ಗಳಿಲ್ಲದೆ ಅನೇಕ ದೂರವಾಣಿ ಸಂಖ್ಯೆಗಳನ್ನೇ ನೆನಪಿನಲ್ಲಿ ಇಟ್ಟುಕೊಳ್ಳುತ್ತಿದ್ದೆವು. ಆದರೆ ಈಗ ತಂತ್ರಜ್ಞಾನಕ್ಕೆ ಅತಿಯಾಗಿ ಅವಲಂಬಿತರಾಗಿರುವುದರಿಂದದ ನೆನಪಿನ ಶಕ್ತಿ ಕುಂದುತ್ತಿದೆ ಎಂದರು. ಆದ್ದರಿಂದ ವಿದ್ಯಾರ್ಥಿಗಳು ಸ್ವತಃ ಆಕಾಶವನ್ನು ಗಮನಿಸಿ ನಕ್ಷತ್ರಗುಚ್ಛಗಳನ್ನು ಗುರುತಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಆಕಾಶವನ್ನು ಒಂದು ಮಟ್ಟಿಗೆ ಅರ್ಥ ಮಾಡಿ ಕೊಂಡಿದ್ದರೂ, ಸಹ ಚಿಕ್ಕ ವಯಸ್ಸಿನಿಂದಲೇ ಅನ್ವೇಷಿಸುವುದು ಒಳ್ಳೆಯ ಹವ್ಯಾಸ. ಆಕಾಶ ಮತ್ತು ಸಮುದ್ರದಲ್ಲಿ ಅನ್ವೇಷಿಸಲು ಇನ್ನೂ ಅನೇಕ ವಿಷಯಗಳಿವೆ ಎಂಬುದನ್ನು ನಾವು ನೆನಪಿಟ್ಟುಕೊಳ್ಳಬೇಕು. ಭೂಭಾಗದಲ್ಲಿಯೂ ಈಗಾಗಲೇ ಅನೇಕ ವಿಷಯಗಳನ್ನು ಅನ್ವೇಷಿಸಲಾಗಿದೆ, ಆದರೂ ಪ್ರತಿಯೊಬ್ಬರಿಗೂ ಅಪಾರ ಅವಕಾಶಗಳಿವೆ. ಆ ಅವಕಾಶಗಳನ್ನು ಬಳಸಿಕೊಳ್ಳುವುದು ನಮ್ಮ ಕೈಯಲ್ಲಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾದ ನಾಸಾ ವಿಜ್ಞಾನಿ ಪ್ರಕೃತಿ ಪ್ರಕಾಶ್ ಶಾಲಾ ಪ್ರಾಂಶುಪಾಲರಾದ ಶೈಲಜಾ ಬೋಳ ಹೆಗ್ಡೆ ಶಾಲಾ ಆಡಳಿತ ಅಧಿಕಾರಿ ನಿತೇಶ್ ಮಾರ್ನಾಡ್ ಸಹಾಯಕ ಆಡಳಿತ ಅಧಿಕಾರಿ ರಾಜೇಶ್, ಕಾಯ೯ಕ್ರಮ ಸಂಯೋಜಕಕರಾದ ಸೌಮ್ಯ ಆದಿತ್ಯ, ಅಶ್ವಿನಿ ಪ್ರಭು ಉಪಸ್ಥಿತರಿದ್ದರು. ನಿಶಾ ರೋಡ್ರಿಗಸ್ ಕಾಯ೯ಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...