ಜವನೆರ್ ಬೆದ್ರದ “ಅಬ್ಬಕ್ಕ ಪ್ರೇರಣಾ ಗೌರವ” ಪುರಸ್ಕಾರಕ್ಕೆ ಮಲ್ಲಿಕಾ ರಾವ್ ಆಯ್ಕೆ

Date:

ಮೂಡಬಿದಿರೆ: ವೀರರಾಣಿ ಅಬ್ಬಕ್ಕ ಅವರ 500ನೇ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ, ‘ಜವನೆರ್ ಬೆದ್ರ’ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಅಬ್ಬಕ್ಕ ಪ್ರೇರಣಾ ಗೌರವ” ಪುರಸ್ಕಾರಕ್ಕೆ ಮೂಡುಬಿದಿರೆ ಧವಲಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಮಲ್ಲಿಕಾ ರಾವ್ ಅವರು ಆಯ್ಕೆಯಾಗಿದ್ದಾರೆ.

ಮಲ್ಲಿಕಾ ರಾವ್ ಅವರು ಕಳೆದ 10 ವರ್ಷಗಳಿಂದ ಧವಲಾ ಕಾಲೇಜಿನ ಲಲಿತ ಕಲಾ ಸಂಘದ ಸಂಯೋಜಕಿಯಾಗಿ ಸೇವೆ ಸಲ್ಲಿಸುತ್ತಿದ್ದು, ಕನ್ನಡ ಭಾಷೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಹಲವಾರು ವಿಚಾರ ಸಂಕಿರಣ, ಧವಲಾಸಿರಿ ಕಾರ್ಯಕ್ರಮ ಆಯೋಜನೆಯಲ್ಲೋ ಶ್ರಮಿಸಿದ್ದಾರೆ.

ರಾಜ್ಯ ಮಟ್ಟದ ಸಾಂಸ್ಕೃತಿಕ ಕಾಯಕ್ರಮಗಳಲ್ಲಿ ತೀರ್ಪುಗಾರರಾಗಿ, ವಿವಿಧ ವಿದ್ಯಾಸಂಸ್ಥೆ, ಸಂಘ ಸಂಸ್ಥೆ ಗಳಲ್ಲಿ ಸಂಪನ್ಮೂಲ ವ್ಯಕ್ತಿ ಯಾಗಿ ಭಾಗವಹಿಸಿರುತ್ತಾರೆ. ಇವರ ಸಾಂಸ್ಕೃತಿಕ ಕಳಕಳಿಯನ್ನು ಗುರುತಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

ಅಲ್ಲದೆ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿ ಅವರು ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ, ಇತ್ತೀಚೆಗೆ ಉಂಬೆಟ್ಟುನಲ್ಲಿ ನಡೆದ ಎನ್.ಎಸ್.ಎಸ್ ವಾರ್ಷಿಕ ಶಿಬಿರದಲ್ಲಿ ಅಲ್ಲಿನ ಎಸ್‌ಡಿಎಂಸಿ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ನಿರೂಪಣೆ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿನ ಅವರ ನಿರಂತರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...