ಮಂಗಳೂರು: ಕೆಎಫ್‌ಸಿಗೆ ದಾಳಿ; 7-8 ತಿಂಗಳ ಹಿಂದಿನ ಮಾಂಸ ದಾಸ್ತಾನು ಪತ್ತೆ: ಬೀಗ ಹಾಕಿಸಿದ ಇಲಾಖಾಧಿಕಾರಿಗಳು

Date:

ಕಲುಷಿತ ಆಹಾರ ಪೂರೈಕೆ ಆರೋಪ

ಮಂಗಳೂರು, ಆ.15: ನಗರದ ಕೆ.ಎಸ್.ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಮತ್ತು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಶನಿವಾರ ದಾಳಿ ನಡೆಸಿದ್ದಾರೆ. ಈ ಸಂದರ್ಭ ಕೆಎಫ್‌ಸಿಯಲ್ಲಿ ಅನೈರ್ಮಲ್ಯ, ಸ್ಟೋರೇಜ್‌ನಲ್ಲಿ ಹಳೆಯ ಮಾಂಸ ಪತ್ತೆ, ಅವಧಿ ಮೀರಿದ ಎಣ್ಣೆ ಕಂಡು ಬಂದಿದೆ. ಇವೆಲ್ಲವನ್ನೂ ಅಧಿಕಾರಿಗಳು ವಶಪಡಿಸಿಕೊಂಡು ಬೀಗ ಹಾಕಿಸಿದ್ದಾರೆ. ಅಲ್ಲದೆ ಪತ್ತೆಯಾದ ಸ್ಯಾಂಪಲ್‌ ಗಳನ್ನು ಪರೀಕ್ಷೆ ಮಾಡಲು ಮೈಸೂರಿಗೆ ಕಳುಹಿಸಿಕೊಡಲಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ವ್ಯಕ್ತಿಯೊಬ್ಬರು ಕೆಎಫ್‌ಸಿಯಿಂದ ಚಿಕನ್ ಫೆರಿ ಆರ್ಡರ್ ಮಾಡಿದ್ದು, ಅದರಂತೆ ಸರಬರಾಜು ಮಾಡಲಾಗಿತ್ತು. ಅದರ ಬಾಕ್ಸ್ ತೆರೆದಾಗ ಮಾಂಸ ಕೆಟ್ಟ ವಾಸನೆ ಬಂದಿತ್ತು. ತಕ್ಷಣ ಅವರು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ರ ಗಮನಕ್ಕೆ ತಂದಿದ್ದಾರೆ. ಸಚಿವರ ಸೂಚನೆಯಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಮತ್ತು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ಜಂಟಿಯಾಗಿ ಕೆಎಫ್‌ಸಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಕೆಎಫ್‌ಸಿಗೆ ಬೆಂಗಳೂರಿನಿಂದ ಕೋಳಿ ಮಾಂಸ ರವಾನೆಯಾಗುತ್ತಿದ್ದು ಎನ್ನಲಾಗಿದೆ. ಸುಮಾರು 7-8 ತಿಂಗಳ ಹಿಂದಿನ ಮಾಂಸವನ್ನು ಇಲ್ಲಿ ದಾಸ್ತಾನಿಡಲಾಗುತ್ತಿತ್ತು ಎನ್ನಲಾಗಿದೆ. ಅಧಿಕಾರಿಗಳು ಸ್ಟೋರೆಜ್ ರೂಂ ಪ್ರವೇಶಿಸಿದಾಗ ಗಬ್ಬು ವಾಸನೆ ಬರುತ್ತಿದ್ದು, ಈ ಬಗ್ಗೆ ಸಿಬ್ಬಂದಿಗಳ ಬಳಿ ಪ್ರಶ್ನಿಸಿದಾಗ ಸಮರ್ಪಕ ಉತ್ತರ ಸಿಗಲಿಲ್ಲ. ಈ ಸ್ಟೊರೇಜ್‌ನಲ್ಲಿ ಮೂರು ಮಾದರಿಯ ಚಿಕನ್‌ಗಳನ್ನು ದಾಸ್ತಾನಿಡಲಾಗಿತ್ತು. ಅದಲ್ಲದೆ ಅವಧಿ ಮೀರಿದ ಎಣ್ಣೆ ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಸಾರ್ವಜನಿಕರ ದೂರಿನ ಮೇರೆಗೆ ದಾಳಿ ಮಾಡಿದಾಗ ಮೂರು ಮಾದರಿಯ ಕೋಳಿ ಮಾಂಸ ಹಾಗೂ ಅವಧಿ ಮೀರಿದ ಎಣ್ಣೆಯನ್ನು ಸಂಗ್ರಹಿಸಲಾಗಿದೆ. ಅದರ ಗುಣಮಟ್ಟ ಪರಿಶೀಲನೆಗೆ ಮೈಸೂರಿನ ಆಹಾರ ತಪಾಸಣಾ ಲ್ಯಾಬೋರೇಟರಿಗೆ ಕಳುಹಿಸಲಾಗುವುದು. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮೇಲ್ನೋಟಕ್ಕೆ ಕಲುಷಿತ ಆಹಾರ ನೀಡಿರುವುದು ಮತ್ತು ಅನೈರ್ಮಲ್ಯ, ಹಳಸಿದ ಮಾಂಸ, ಅವಧಿ ಮೀರಿದ ಎಣ್ಣೆ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಹಾಗಾಗಿ ಸದ್ಯ ಮಳಿಗೆಯನ್ನು ಬಂದ್ ಮಾಡಲು, ಎಲ್ಲಾ ಉತ್ಪನ್ನಗಳನ್ನು ತೆರವು ಮಾಡಿ ಶುಚಿಗೊಳಿಸಲು ಸೂಚಿಸಲಾಗಿದೆ. ಲ್ಯಾಬೋರೇಟರಿ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಪ್ರವೀಣ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...