ಮಂಗಳೂರು ವಿವಿ: ಬ್ಯಾರಿ ಅಧ್ಯಯನ ಪೀಠದಿಂದ ಬ್ಯಾರಿ ಭಾಷಾ ದಿನಾಚರಣೆ

Date:

ಮಂಗಳೂರು, ಅ.3: ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಬ್ಯಾರಿ ಅಧ್ಯಯನ ಪೀಠದಿಂದ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ಬ್ಯಾರಿ ಭಾಷಾ ದಿನ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಭಾಷೆಯ ಮೇಲೆ ಅಭಿಮಾನ ಮತ್ತು ಹೆಮ್ಮೆ ಬೇಕು. ಆದರೆ ಅದು ಯಾವತ್ತೂ ಸಂಘರ್ಷಕ್ಕೆ ಎಡೆಮಾಡಿಕೊಡಬಾರದು. ಭಾಷೆಯ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಶ್ರಮಿಸುವುದರೊಂದಿಗೆ ಸೌಹಾರ್ದ ವಾತಾವರಣ ರೂಪಿಸಬೇಕಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜ ಸೇವಕ ಫಾರೂಕ್ ಉಳ್ಳಾಲ್ ಉಪನ್ಯಾಸ ನೀಡಿದರು. ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬೆಳವಣಿಗೆಯ ನಿಟ್ಟಿನಲ್ಲಿ ಶ್ರಮಿಸಿದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಮಾಜಿ ಸದಸ್ಯರುಗಳಾದ ಆಲಿಯಬ್ಬ ಜೋಕಟ್ಟೆ, ಯೂಸುಫ್ ವಕ್ತಾರ್, ಹುಸೈನ್ ಕಾಟಿಪಳ್ಳ ಅವರನ್ನು ಗೌರವಿಸಲಾಯಿತು. ಬ್ಯಾರಿ ಅಧ್ಯಯನ ಪೀಠದ ಸದಸ್ಯ ಬಿ.ಎ. ಮುಹಮ್ಮದ್ ಹನೀಫ್ ಅಭಿನಂದನಾ ಭಾಷಣ ಮಾಡಿದರು.ವೇದಿಕೆಯಲ್ಲಿ ಅಧ್ಯಯನ ಪೀಠದ ಸದಸ್ಯರಾದ ಉಮರ್ ಯು.ಎಚ್., ಬಶೀರ್ ಬೈಕಂಪಾಡಿ, ಖಾಲಿದ್ ತಣ್ಣೀರುಬಾವಿ, ಮೊಯಿದಿನ್ ಬಾದ್‌ಷಾ ಸಂಬಾರತೋಟ, ಹಂಝ ಮಲಾರ್ ಉಪಸ್ಥಿತರಿದ್ದರು.ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕರ್ ಸಿದ್ದೀಕ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಡಾ.ಎನ್. ಇಸ್ಮಾಯೀಲ್ ವಂದಿಸಿದರು. ವಿದ್ಯಾರ್ಥಿನಿ ಆಯಿಶಾ ನಫೀಹಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...