ಮಂಗಳೂರು ವಿ.ವಿ ಮಟ್ಟದ ಚರ್ಚಾ ಸ್ಪರ್ಧೆ ಉದ್ಘಾಟನೆ

Date:

ಕೊಣಾಜೆ; ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯವು ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ ಇದರ ಆಶ್ರಯದಲ್ಲಿ, ಯುಜಿ (ಪದವಿ) ಮತ್ತು ಪಿಜಿ (ಸ್ನಾತಕೋತ್ತರ) ವಿದ್ಯಾರ್ಥಿಗಳಿಗಾಗಿ ಸಹಕಾರ ಕುರಿತು ವಿಶ್ವವಿದ್ಯಾಲಯ ಮಟ್ಟದ ಸಹಕಾರ ಕುರಿತು ಚರ್ಚಾ ಸ್ಪರ್ಧೆಯು ಇತ್ತೀಚೆಗೆ ನಡೆಯಿತು.‌‌‌ ಸ್ಪರ್ಧೆಯ ಸ್ನಾತಕೋತ್ತರ ವಿಭಾಗದಲ್ಲಿ ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನ ಶ್ರೀರಕ್ಷಾ ಕೆ ಪ್ರಥಮ ಬಹುಮಾನ, ಶ್ರೀದೇವಿ ಎನ್. ದ್ವಿತೀಯ ಬಹುಮಾನ ಹಾಗೂ ಮಂಗಳೂರು‌ ವಿವಿ ವಾಣಿಜ್ಯ ವಿಭಾಗದ ದೀಕ್ಷಿತ್ ಕುಮಾರ್ ತೃತೀಯ ಬಹುಮಾನ ಪಡೆದುಕೊಂಡರು. ಪದವಿ ವಿಭಾಗದಲ್ಲಿ ಉಜಿರೆ ಎಸ್ ಡಿ ಎಂ ಬಿ.ಇಡಿ ಕಾಲೇಜಿನ ಫಾತಿಮತ್ ರಫಿಯಾ ಪ್ರಥಮ ಬಹುಮಾನ, ಉಜಿರೆ ಎಸ್ ಡಿಎಂ ಕಾಲೇಜಿನ ಗಿಂದರ್ ಶರಣಪ್ಪ ದ್ವಿತೀಯ ಹಾಗೂ ಬ್ರಹ್ಮಾವರ ಕಾಲೇಜಿನ ಅಭಿದ್ನಾ ಎಸ್‌ಎಂಎಸ್ ಮೂರನೇ ಬಹುಮಾನ ಪಡೆದುಕೊಂಡರು. ಎರಡೂ ವಿಭಾಗಗಳಲ್ಲಿ ಪ್ರಥಮ ಬಹುಮಾನ ಗೆದ್ದವರು ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮೂಡುಬಿದಿರೆಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ಼್ ಕೊ-ಅಪರೇಟಿವ್ ಪ್ರಾಧ್ಯಾಪಕಿ ಬಿಂದು ನಾಯರ್ ಅವರು ನೆರವೇರಿಸಿ ಮಾತನಾಡಿದರು.ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರದ ಪ್ರಾಧ್ಯಾಪಕ ಡಾ. ಪರಮೇಶ್ವರ ಅವರು ಭಾಗವಹಿಸಿ ಮಾತನಾಡಿದರು. ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಚಂದ್ರಶೇಖರ್ ಆರ್. , ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ರಾಧಾಕೃಷ್ಣ ಟಿ. ಉಪಸ್ಥಿತರಿದ್ದರು.ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಡಾ. ಪ್ರಶಾಂತ ನಾಯ್ಕ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು. ಜಯಕುಮಾರಿ ಎನ್. ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...