ಮಂಗಳೂರು: ‘ಗಂಭೀರ ಪ್ರಕರಣ ಆರೋಪಿಗಳಿಗೆ ಜಾಮೀನು ನೀಡುವಾಗ ಎಚ್ಚರ’ – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

Date:


ಮಂಗಳೂರು, ಜ. 25: ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಆರೋಪಿಗಳಿಗೆ ಜಾಮೀನು ಸಂದರ್ಭ ಶ್ಯೂರಿಟಿ ಒದಗಿಸುವವರು ಎಚ್ಚರಿಕೆ ವಹಿಸದಿದ್ದರೆ ಗಂಭೀರವಾದ ಪರಿಣಾಮವನ್ನು ಎದುರಿಸಬೇಕಾಗಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡುವ ವೇಳೆ, ಆರೋಪಿಗಳನ್ನು ಬಂಧಿಸುವುದು ಒಂದು ಕಡೆಯಾದರೆ, ಆರೋಪಿಗಳು ಸಿಗದಿದ್ದಾಗ ಅವರಿಗೆ ಜಾಮೀನು ನೀಡಿದವರ ಮೇಲೆ ಕ್ರಮ ವಹಿಸುವಂತೆ ಪ್ರತಿ ಠಾಣೆಗಳಿಗೂ ಸೂಚನೆ ನೀಡಲಾಗಿತ್ತು. ಅದರಂತೆ 15 ಮಂದಿ ರೌಡಿಗಳನ್ನು ಬಂಧಿಸಿ ಪ್ರಕರಣಗಳ ವಿಚಾರಣೆ ಆರಂಭಿಸಲಾಗಿದೆ. ಅದಲ್ಲದೆ, ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಕಾರ್ಯಾಚರಣೆ ಆರಂಭಿಸಲಾಗಿದೆ.

ನಗರದಲ್ಲಿ ಕಳೆದ 6 ತಿಂಗಳಿನಿಂದ ದೀರ್ಘಾವಧಿಯ ಗಂಭೀರ ಪ್ರಕರಣಗಳಾದ ಕೊಲೆ, ಮತೀಯ ಗಲಭೆ ವೇಳೆ ಕಲ್ಲು ತೂರಾಟ, ಮತೀಯ ಕೊಲೆ ಯತ್ನ, ಅತ್ಯಾಚಾರ, ಗುಂಪು ಅತ್ಯಾಚಾರ ಮೊದಲಾದ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿ ಕೊಂಡಿರುವ ರೌಡಿ ಶೀಟರ್‌ಗಳನ್ನು ಹಿಡಿಯುವ ಉದ್ದೇಶದಿಂದ ಪೊಲೀಸರಿಂದ ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...