ಮಂಜನಾಡಿ ಉರೂಸ್ ಧ್ವಜಾರೋಹಣ

Date:


ಮಂಜನಾಡಿ: ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಅಸಯ್ಯಿದ್ ಇಸ್ಮಾಯಿಲ್ ವಲಿಯುಲ್ಲಾ ಅಲ್ ಬುಖಾರಿ ಅವರ ಹೆಸರಿನಲ್ಲಿ ಡಿಸೆಂಬರ್ 17 ರಿಂದ ಡಿ.27 ರ ವರೆಗೆ ಮಸೀದಿ ವಠಾರದಲ್ಲಿ ಗೌರವ ಅಧ್ಯಕ್ಷ ಸೈಯದ್ ಆಟಕೋಯ ತಂಙಳ್ ಕುಂಬೋಳ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಉರೂಸ್ ಕಾರ್ಯಕ್ರಮ ದ ಧ್ವಜಾರೋಹಣ ಕಾರ್ಯಕ್ರಮ ಶುಕ್ರವಾರ ನಡೆಯಿತು.


ಮಸೀದಿ ಯ ಗೌರವ ಅಧ್ಯಕ್ಷ ಸೈಯದ್ ಆಟಕೋಯ ತಂಙಳ್ ಕುಂಬೋಳ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮಸೀದಿಯ ಕಾರ್ಯಕ್ರಮ ನಾವು ಜವಾಬ್ದಾರಿ ಯುತವಾಗಿ ನಿರ್ವಹಣೆ ಮಾಡಬೇಕು. ಅಭಿವೃದ್ದಿ ನಮ್ಮ ಗುರಿ ಆಗಿರುತ್ತದೆ.
ಉರೂಸ್ ಕಾರ್ಯಕ್ರಮ ಯಶಸ್ಸು ಆಗಿ ನಡೆಯಲಿ ಎಂದು ಹಾರೈಸಿದರು.


ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿ ಮುದರ್ರಿಸ್ ಅಹ್ಮದ್ ಬಾಖವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಮೈಸೂರು ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಜುಮ್ಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಅಝೀಝ್ ಪರ್ತಿಪ್ಪಾಡಿ ಸ್ವಾಗತಿಸಿದರು.
ಈ ಕಾರ್ಯಕ್ರಮದಲ್ಲಿ ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿ ಉಪಾಧ್ಯಕ್ಷರಾದ ಆಲಿಕುಂಞಿ ಪಾರೆ, ಮೊಯ್ದಿನ್ ಕುಟ್ಟಿ, ಮುನೀರ್ ಬಾವ, ಕೋಶಾಧಿಕಾರಿ ಉಮರ್ ಕುಂಞಿ ಮೋರ್ಲ, ಕಾರ್ಯದರ್ಶಿ ಗಳಾದ ಹಮೀದ್ ಆರಂಗಡಿ, ಬಾಪಕುಂಞಿ, ಕುಂಞಿ ಬಾವ ಕಟ್ಟೆಮಾರ್, ನವಾಝ್ ನರಿಂಗಾನ, ಇಬ್ರಾಹಿಂ ಅಹ್ಸನಿ,ಎ.ಎಂ.ಇಬ್ರಾಹೀಂ, ಟಿ.ಮೊಹಮ್ಮದ್, ಅಬ್ದುಲ್ ರಹ್ಮಾನ್ ರಝ್ವಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...