ಮಾರೂರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಿದ್ಧತಾ ಸಭೆ

Date:


ಮೂಡಬಿದಿರೆ:ಶ್ರೀ ಗೋಪಾಲಕೃಷ್ಣ ಕೊಡಮಣಿತ್ತಾಯ ದೇವಸ್ಥಾನ ಮಾರೂರು ಹೊಸಂಗಡಿ ಇದರ ಬ್ರಹ್ಮಕಲಶೋತ್ಸವದ ಸಿದ್ಧತಾ ಸಭೆಯು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜೀವಂಧರ್ ಕುಮಾರ್ ಅಧ್ಯಕ್ಷತೆಯಲ್ಲಿ ಶನಿವಾರ ಸಂಜೆ ದೇವಸ್ಥಾನದ ಆವರಣದಲ್ಲಿ ನಡೆಯಿತು.

ಬ್ರಹ್ಮಕಲಶೋತ್ಸವ ಕಾರ್ಯಕ್ರಮವು ಎಪ್ರಿಲ್ .26ರಿಂದ ಮೇ1 ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಕ್ಷೇತ್ರದಲ್ಲಿ ನಡೆಯುವ ವಿವಿಧ ಧಾಮಿ೯ಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ರೂಪು ರೇಷೆಗಳ ಬಗ್ಗೆ ಚರ್ಚಿಸಲಾಯಿತು. ಸಭಾ ಕಾರ್ಯಕ್ರಮಕ್ಕೆ ಆಮಂತ್ರಿಸಬೇಕಾದ ಸ್ವಾಮೀಜಿಗಳು, ಧಾರ್ಮಿಕ ಮುಖಂಡರು, ಇತರ ಪ್ರಮುಖರ ಹೆಸರುಗಳನ್ನು ಸಭೆಯಲ್ಲಿ ಪರಿಶೀಲಿಸಲಾಯಿತು.

ಹೊರೆಕಾಣಿಕೆ ಹೊರಡುವ ದಿನ ಮತ್ತು ಸ್ಥಳದ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಲಾಯಿತು. ದಿನಂಪ್ರತಿ ಸೇರುವ ಭಕ್ತರ ಅಂದಾಜು ಸಂಖ್ಯೆ ಮತ್ತು ಊಟೋಪಚಾರ ವ್ಯವಸ್ಥೆಗಳ ಬಗ್ಗೆ ಚಚಿ೯ಸಲಾಯಿತು. ಬ್ರಹ್ಮಕಲಶೋತ್ಸವ ಯಶಸ್ವಿಗೆ ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಅದರ ಸದಸ್ಯರು ತಮ್ಮ ಜವಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವಂತೆ ಸಭೆಯಲ್ಲಿ ತಿಳಿಸಲಾಯಿತು.

ದೇವಸ್ಥಾನದ ಅರ್ಚಕರಾದ ವೆಂಕಟರಾಜ್ ಅಸ್ರಣ್ಣರು, ಜೀಣೋ೯ದ್ಧಾರ ಸಮಿತಿ ಕಾಯ೯ಧ್ಯಕ್ಷರಾದ ಶಂಭು ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ರವಿಪ್ರಸಾದ್ ಕೆ. ಶೆಟ್ಟಿ, ಸಮಿತಿ ಪ್ರಮುಖರಾದ ಜಯರಾಜ್ ಬಲ್ಲವ ಸಂಗಡಿಗುತ್ತು, ತೋಡಾರು ದಿವಾಕರ ಶೆಟ್ಟಿ, ಮಿಥುನ್ ಶೆಟ್ಟಿ ಪಡ್ಯೋಡಿಗುತ್ತು, ಸುನೀಲ್ ಶೆಟ್ಟಿ, ದಿಲೀಪ್ ಕುಮಾರ್ ಶೆಟ್ಟಿ, ಸತೀಶ್ ಶೆಟ್ಟಿ, ಯಶೋಧರ ಮಾರೂರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...