ಮೇ 5: ಉಳ್ಳಾಲ ತಾಲೂಕು ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನ

Date:

ಉಳ್ಳಾಲ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ‘ಮೇಲ್ತೆನೆ’ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಉಳ್ಳಾಲ ತಾಲೂಕು ಮೂರನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ಮೇ 5 ರಂದು ಮುಡಿಪು ಹೂಹಾಕುವ ಕಲ್ಲು ನಂದರವದವಿನ ಎಸ್.ಕೆ ಮಲ್ಟಿಪರ್ಪಸ್ ಹಾಲ್‌ನಲ್ಲಿ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಯು.ಎಚ್.ಉಮರ್ ಹೇಳಿದರು.

ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿ, ಮೇ 5 ಮಂಗಳವಾರ ಬೆಳಿಗ್ಗೆ 9.30ಕ್ಕೆ ಹೂಹಾಕುವ ಕಲ್ಲು ಜಂಕ್ಷನ್‌ನಿಂದ ಸಮ್ಮೇಳನ ಸಭಾಂಗಣದ ತನಕ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಎಸ್. ಕೆ. ಅಬ್ದುಲ್ ಖಾದ‌ರ್ ಹಾಜಿ ಉದ್ಘಾಟಿಸಲಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಹೆಚ್. ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಿಗೆ 10.30ಕ್ಕೆ ಕರ್ನಾಟಕ ವಿಧಾನಸಭಾಧ್ಯಕ್ಷ ಡಾ. ಯು. ಟಿ. ಖಾದರ್ ಫರೀದ್ ಸಮ್ಮೇಳನ ಉದ್ಘಾಟಿಸಲಿದ್ದು, ಬಹುಬಾಷಾ ಕವಿ, ಹಾಡುಗಾರ ಬಶೀರ್ ಅಹ್ಮದ್ ಕಿನ್ಯ ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರನಾಥ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ನಾನಿ ಅಲ್ಯಾರಿಸ್, ಉಡುಪಿ ಜಿಲ್ಲಾ ಆಯುಷ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಯಾಲ್ ಕೆ, ಉಳ್ಳಾಲ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಫೀಕ್ ಅಂಬ್ಲಮೊಗರು, ಉಳ್ಳಾಲ ತಾಲೂಕು ಸ್ವಚ್ಛತಾ ರಾಯಬಾರಿ ಶೀನ ಶೆಟ್ಟಿ ಮತ್ತು ಮುಡಿಪು ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣ ಮೂಲ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಝುಲೇಖ ಮುಮ್ರಾಜ್ ಅವರ ‘ನಿಲಾವು’ (ಲೇಖನಗಳ ಸಂಕಲನ), ಆಯಿಷಾ ಯು.ಕೆ ಸಂಪಾದಕತ್ವದ ‘ಹಸ್‌ರತ್’ (ಕವನ ಸಂಕಲನ) ಬ್ಯಾರಿ ಕೃತಿಗಳು ಬಿಡುಗಡೆಯಾಗಲಿವೆ ಎಂದು ಹೇಳಿದರು. ಮಧ್ಯಾಹ್ನ 12.00ಕ್ಕೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯನ್ನು ಉಪನ್ಯಾಸಕ ಪ್ರೊ. ಹೈದರಾಲಿ ಕೆ. ನಿರೂಪಿಸಲಿದ್ದು, ಪ್ರೊ. ನಿಯಾಝ್ ಪಡೀಲ್, ಕೆ. ಎಂ. ಅಬೂಬಕ್ಕರ್ ಸಿದ್ದೀಕ್ ಮೊಂಟುಗೋಳಿ, ಶಾಹಿದಾ ಬಿ.ಎಂ. ಮತ್ತು ಶಮೀಮಾ ಕುತ್ತಾರ್ ಚರ್ಚಾಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 200 ರಿಂದ ಬ್ಯಾರಿ ಕವಿಗೋಷ್ಠಿ ನಡೆಯಲಿದೆ ಎಂದರು.ಸಂಜೆ ಸಂಜೆ 4.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಟಿ. ಇಸ್ಮಾಯಿಲ್ ಮಾಸ್ಟರ್ ,ಅಬ್ದುಲ್ ಖಾದ‌ರ್ ಸಣ್ಣ ಬೈಲ್ ಪರಪ್ಪು, ಖತೀಜಮ್ಮ ನಡುಪದವು, ಬೀಫಾತುಮ್ಮ ಮಾರ್ಗತಲೆ ಸನ್ಮಾನ ಸ್ವೀಕರಿಸಲಿದ್ದಾರೆ. ಡಾ. ಹರೇಕಳ ಹಾಜಬ್ಬ, ಡಾ. ಪಿ.ಎಲ್ ಧರ್ಮ ಮತ್ತು ಝಾಹಿದ್ ಮಲಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಡಾ. ಅಬೂಬಕ್ಕರ್ ಸಿದ್ದೀಕ್ ಸಮಾರೋಪ ಭಾಷಣ ಮಾಡಲಿದ್ದು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದಲ್ಲಿ ದಫ್, ಬ್ಯಾರಿ ಹಾಡುಗಳ ಸಂಭ್ರಮ ಮತ್ತು ಸತ್ತಾರ್ ಗೂಡಿನ ಬಳಿ ತಂಡದಿಂದ ‘ತೆರು ತಪ್ಪಿರ್’ ಬ್ಯಾರಿ ನಾಟಕ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನದ ಅಂಗವಾಗಿ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ವಿ. ಇಬ್ರಾಹಿಂ ನಡುಪದವು, ಕಾರ್ಯಾಧ್ಯಕ್ಷ ಆಲಿಕುಂಞ ಪಾರೆ, ಸಂಚಾಲಕಿ ಸಹಾನ ಬಿ.ಎಂ., ಸಹ ಸಂಚಾಲಕಿ ಆಯಿಶಾ ಪೆರ್ನೆ, ಮೇಲ್ತನೆ ಅಧ್ಯಕ್ಷ ಮಂಗಳೂರ ರಿಯಾಝ್, ಮಾಧ್ಯಮ ಸಂಚಾಲಕ ಬಶೀರ್ ಕಲ್ಕಟ್ಟ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...