ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಂಕನ ಶಿಬಿರ

Date:

ಮೂಡುಬಿದಿರೆ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವು ಸರಕಾರಿ ಪ್ರೌಢಶಾಲೆ ಪ್ರಾಂತ್ಯ ಇಲ್ಲಿ ಮಂಗಳವಾರ ನಡೆಯಿತು.

ಪುರಸಭಾ ಸದಸ್ಯ ಇಕ್ಬಾಲ್ ಕರಿಂ ಅವರು ಶಿಬಿರವನ್ನು ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಕ್ಷತಾ ನಾಯಕ್ ಅವರು ಭಾಗವಹಿಸಿ ವೈದ್ಯಕೀಯ ತಪಾಸಣೆಯ ಮಹತ್ವವನ್ನು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಅವರು ಪೋಷಕರಿಗೆ ಮತ್ತು ಮಕ್ಕಳಿಗೆ ವಿಶೇಷ ಅಗತ್ಯವುಳ್ಳ ಮಕ್ಕಳ ಸಾಧನ ಸಲಕರಣೆಗಳ ಅಗತ್ಯತೆ ಮತ್ತು ಬಳಕೆಯ ಬಗ್ಗೆ ಹಾಗೂ ಇಲಾಖೆ ಕೈಗೊಳ್ಳುವ ಹಲವಾರು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಮನ್ವಯ ಅಧಿಕಾರಿ ಸೌಮ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಐ. ಇ.ಆರ್.ಟಿ.ಸುಶೀಲ ಅವರು ಕಾರ್ಯಕ್ರಮ ನಿರೂಪಿಸಿದರು. ಪ್ಲೇವಿ ಡಿ’ಸೋಜ ವಂದಿಸಿದರು. ವೆನ್ ಲಾಕ್ ಜಿಲ್ಲಾ ಆಸ್ಪತ್ರೆ ಇಲ್ಲಿನ ವೈದ್ಯರ ತಂಡ ಆಗಮಿಸಿ ಸುಮಾರು ಐವತ್ತು ವಿದ್ಯಾರ್ಥಿಗಳ ವೈದ್ಯಕೀಯ ತಪಾಸಣೆ ನಡೆಸಿದರು. ಅಲಿಂಕೋ ಸಂಸ್ಥೆಯಿಂದ ಆಗಮಿಸಿದಂತಹ ವೈದ್ಯರು ಸಾಧನ ಸಲಕರಣೆಗಳ ಅಳತೆ ಮಾಪನವನ್ನು ಪಡೆದು ಸಾಧನ ಸಲಕರಣೆಗಳನ್ನು ಮಂಜೂರು ಗೊಳಿಸಲು ವರದಿಯನ್ನು ನೀಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...