ಮಿಜಾರು: ವಿವೇಕ ಯೋಜನೆಯಡಿ ಮಂಜೂರಾದ 3 ಕೊಠಡಿಗಳ ಉದ್ಘಾಟನೆ

Date:

ಮೂಡುಬಿದಿರೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಮಿಜಾರು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ತೆಂಕಮಿಜಾರು ಇಲ್ಲಿಗೆ ವಿವೇಕ ಯೋಜನೆಯಡಿ ಮಂಜೂರಾದ 3 ಕೊಠಡಿಗಳನ್ನು ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಬುಧವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ವಿವೇಕ ಯೋಜನೆಯಡಿ ವಿವಿಧ ಶಾಲೆಗಳಿಗೆ ಕೊಠಡಿಗಳನ್ನು ನೀಡಲಾಗಿದೆ. ಶಾಲೆಗಳಿಗೆ ಅನುದಾನವನ್ನು ಒದಗಿಸಿ ಅಭಿವೃದ್ಧಿಗೊಳಿಸಲಾಗುತ್ತಿದೆ ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಫಲಿತಾಂಶವೂ ಶೇ. 100 ಬರಬೇಕು. ಶಾಲೆಯು ಕೆಪಿಎಸ್ ಆಗಿರುವುದರಿಂದ ಮುಂದೆ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪ. ಪೂ. ಕಾಲೇಜು ಒಂದೇ ಕ್ಯಾಂಪಸ್ ನಲ್ಲಿ ಬರಲಿದೆ ಎಂದರು. ತೆಂಕಮಿಜಾರು ಗ್ರಾ. ಪಂ. ಅಧ್ಯಕ್ಷೆ ಶಾಲಿನಿ ಕೆ. ಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು.

ತೆಂಕಮಿಜಾರು ಗ್ರಾ. ಪಂ. ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಸದಸ್ಯೆ ಗೀತಾ, ಇರುವೈಲು ಗ್ರಾ. ಪಂ. ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ವಕೀಲ ಶಾಂತಿಪ್ರಸಾದ್ ಹೆಗ್ಡೆ, ಉದ್ಯಮಿ ಸುರೇಶ್ ಶೆಟ್ಟಿ, ಅಶೋಕ್ ಶೆಟ್ಟಿ ತೋಡಾರು ದಯಾನಂದ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಎಂ. ಎನ್. ಚಂದ್ರು, ಪ್ರಾಥಮಿಕ ಶಾಲಾ ಶಿಕ್ಷಕಿ ನಾಗರತ್ನ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...