ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು, ಭಾರತಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಸೇರಿದಂತೆ ಅನೇಕ ರೀತಿಯ ಬದಲಾವಣೆಗಳಾಗಿವೆ. ಯಾವುದೇ ಸಮಾಜ, ಸಂಸ್ಥೆಯೊಳಗೆ ಗಡಿರೇಖೆಗಳು ಅಪಾಯಕಾರಿ, ಜಾತಿ ಧರ್ಮಗಳ ಮೂಲಕ ಕಂದಕ ಸೃಷ್ಡಿಯಾಗಬಾರದು. ನಾವು ಸ್ವತಃ ಆತ್ಮಾವಲೋಕನ ಮಾಡುವುದರೊಂದಿಗೆ ಸೌಹಾರ್ದತೆಯ ಸಮಾಜ ನಿರ್ಮಿಸಬೇಕಿದೆ ಎಂದರು.
ಕುಲಸಚಿವ ಕೆ.ರಾಜು ಮೊಗವೀರ ಅವರು ಮಾತನಾಡಿ, ಸ್ವಾತಂತ್ರ್ಯದ ಶುಭದಿನದಲ್ಲಿ ತ್ಯಾಗ ಬಲಿದಾನದ ಮಾಡಿದ ಮಹಾತ್ಮರನ್ನು ನೆನಪಿಸಿಕೊಳ್ಳುತ್ತಾ ಶಾಂತಿ, ಸಮಾನತೆ, ಸಹಬಾಳ್ವತೆಯೊಂದಿಗೆ ಬಾಳುವುದರೊಂದಿಗೆ ದೇಶ ಕಟ್ಟುವ ಕೆಲಸ ಮಾಡೋಣ ಎಂದರು.
ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ , ದೈಹಿಕ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಡಾ.ಸಂತೋಷ್ ಜೆರಾಲ್ಡ್ ಡಿಸೋಜ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾದ ಪ್ರೊ.ಪ್ರಶಾಂತ್ ನಾಯ್ಕ್ ಅವರು ಸ್ವಾಗತಿಸಿದರು. ದೈಹಿಕ ಶಿಕ್ಷಣ ವಿಭಾಗದ ಡಾ.ಪ್ರಸನ್ನ ಅವರು ಕಾರ್ಯಕ್ರಮ ನಿರೂಪಿಸಿದರು. ಸಹ ಪ್ರಾಧ್ಯಾಪಕ ಡಾ.ವಿಶ್ವನಾಥ್ ಅವರು ವಂದಿಸಿದರು. ಮಹೇಂದ್ರ ಹಾಗೂ ಬಳಗದವರು ದೇಶಭಕ್ತಿ ಗೀತೆಗಳನ್ನು ಹಾಡಿದರು.