ಮೂಡುಬಿದಿರೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿಯ ನವಂಬರ್ ತಿಂಗಳ ಮಾಸಿಕ ಸಭೆಯು ಸಮಾಜ ಮಂದಿರದಲ್ಲಿ ಭಾನುವಾರ ನಡೆಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗೋಪಾಲ್ ಮಾರೂರು, ರುಕ್ಕಯ ಪೂಜಾರಿ, ಸಂತೋಷ್ ಶೆಟ್ಟಿ ಹಾಗೂ ದಿನೇಶ್ ಅಶ್ವತ್ಥಪುರ ಅವರನ್ನು ಹಾಗೂ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಕಮಿಟಿಯ ಕಾನೂನು ವಿಭಾಗದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮರ್ವಿನ್ ಲೋಬೊ ಅವರನ್ನು ಸನ್ಮಾನಿಸಲಾಯಿತು.

ಇದೇ ಸಂದಭ೯ದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಪದ್ಮಪ್ರಸಾದ್ ಜೈನ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಇತ್ತೀಚೆಗೆ ನಿಧನರಾಗಿರುವ ಬೆಳುವಾಯಿ ಗ್ರಾ. ಪಂ. ಸದಸ್ಯ ಫಣಿರಾಜ್ ಜೈನ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾಯ೯ದಶಿ೯ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮುಡಾ ಅಧ್ಯಕ್ಷ ಹಷ೯ವಧ೯ನ್ ಪಡಿವಾಳ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಡುಬಿದಿರೆ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯ ಚಂದ್ರಹಾಸ ಸನಿಲ್, ಕಾಂಗ್ರೆಸ್ ನ ಮಹಿಳಾ ಅಧ್ಯಕ್ಷೆ ಸುಪ್ರಿಯಾ ಡಿ’ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅನೀಶ್ ಡಿ’ಸೋಜಾ, ಪುರಸಭಾ ಸದಸ್ಯರಾದ ಕೊರಗಪ್ಪ, ಜೊಸ್ಸಿ ಮಿನೇಜಸ್, ಪುರಂದರ ದೇವಾಡಿಗ, ಬೆಳುವಾಯಿ ಗ್ರಾ. ಪಂ. ಮಾಜಿ ಅಧ್ಯಕ್ಷ ರಾಘು ಪೂಜಾರಿ ಮತ್ತಿತರ ಮುಖಂಡರು ಈ ಸಂದಭ೯ದಲ್ಲಿದ್ದರು.


