
ಕನಸುಗಳನ್ನು ನನಸು ಮಾಡುವ ಛಲಗಾರ ಡಾ. ಹಾಜಿ ಯು ಕೆ ಮೋನು ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು
ಉದ್ಯಮ ಕ್ಷೇತ್ರದಲ್ಲಿ ಅತ್ಯಂತ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಹಾಜಿ ಡಾ. ಮೋನು ಅವರು ಸಾವಿರಾರು ಮಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಸಮಾಜಮುಖಿ ಉದ್ಯಮಿಯ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಜಾತಿ-ಮತ ಭೇದವಿಲ್ಲದೆ ಬಡವರು, ನಿರ್ಗತಿಕರು ಹಾಗೂ ಅಗತ್ಯವಿರುವವರಿಗೆ ಮನೆ ನಿರ್ಮಾಣ, ಮದುವೆ ಸಹಾಯ ಸೇರಿದಂತೆ ಅನೇಕ ಸಮಾಜಸೇವಾ ಕಾರ್ಯಗಳ ಮೂಲಕ ಮಾನವೀಯತೆಯ ಮಾದರಿಯಾಗಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿಯೂ ಅವರು ಇತಿಹಾಸ ನಿರ್ಮಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೇ ಎಲ್‌ಕೆಜಿ ನಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ಕೋರ್ಸ್‌ಗಳನ್ನು ಆರಂಭಿಸಿ, ಇಂದು ಸುಮಾರು 8,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಕನಚೂರು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯನ್ನು ಕಟ್ಟಿಬೆಳೆಸಿದ್ದಾರೆ. ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಆಸ್ಪತ್ರೆಯನ್ನೂ ನಿರ್ಮಿಸಿ ಸಮಾಜಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.
ಸಾಮಾನ್ಯ ವ್ಯಕ್ತಿಯೂ ದೃಢ ಸಂಕಲ್ಪ, ಪರಿಶ್ರಮ ಮತ್ತು ಸೇವಾ ಮನೋಭಾವದಿಂದ ಅಸಾಧ್ಯವೆನಿಸುವ ಸಾಧನೆಗಳನ್ನು ಮಾಡಬಹುದು ಎಂಬುದನ್ನು ತಮ್ಮ ಬದುಕಿನ ಮೂಲಕ ಸಾಬೀತುಪಡಿಸಿರುವ ಛಲಗಾರರು ಕನಚೂರು ಹಾಜಿ ಡಾ. ಯು ಕೆ ಮೋನು.
ಅವರ ಜನ್ಮದಿನದ ಈ ಶುಭ ಸಂದರ್ಭದಲ್ಲಿ, ಸರ್ವಶಕ್ತನಾದ ಅಲ್ಲಾಹನು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ, ನೆಮ್ಮದಿ ಹಾಗೂ ಇನ್ನಷ್ಟು ಸಮಾಜಸೇವೆ ಮಾಡುವ ಶಕ್ತಿ ಮತ್ತು ಯಶಸ್ಸನ್ನು ಕರುಣಿಸಲಿ. ಅವರ ಎಲ್ಲ ಸತ್ಕಾರ್ಯಗಳು ಹಾಗೂ ಕನಸುಗಳು ನನಸಾಗಲಿ ಎಂದು ಹೃತ್ಪೂರ್ವಕವಾಗಿ ಪ್ರಾರ್ಥಿಸುತ್ತೇನೆ.
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
– ಮಹಮ್ಮದ್ ಅಸ್ಗರ್, ವಕೀಲರು


