ಪುರಸಭಾ ವ್ಯಾಪ್ತಿಯ ವಿವಿಧ 32 ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೋಟ್ಯಾನ್ ಶಿಲಾನ್ಯಾಸ

Date:

ಮೂಡುಬಿದಿರೆ : 2025-26ನೇ ಸಾಲಿನ ಪುರಸಭಾ ನಿಧಿಯಿಂದ 2.77 ಕೋ. ವೆಚ್ಚದಲ್ಲಿ ನಡೆಯಲಿರುವ 32 ವಿವಿಧ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ. ಕೋಟ್ಯಾನ್ ಮಾರೂರಿನಲ್ಲಿ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.
ನಂತರ ಮಾತನಾಡಿದ ಅವರು ಪುರಸಭಾ ವ್ಯಾಪ್ತಿಯ ಬೇರೆ ಬೇರೆ ವಾಡ್೯ಗಳಲ್ಲಿ ಮೂಲಭೂತ ಸೌಕಯ೯ಗಳಿಗೆ ಅನುದಾನವನ್ನು ಜೋಡಿಸಿಕೊಂಡು ಕಾಮಗಾರಿಗಳನ್ನು ಆರಂಭಿಸಲಾಗಿದೆ. ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಬಸ್ ನಿಲ್ದಾಣ, ಚರಂಡಿ, ರಸ್ತೆಗಳಿಗೆ ಒಂದೇ ಕಡೆಯಲ್ಲಿ ಶಂಕುಸ್ಥಾಪನೆಯನ್ನು ನೆರವೇರಿಸಲಾಗಿದೆ ಎಂದ ಅವರು ಪುರಸಭಾ ವ್ಯಾಪ್ತಿಯಲ್ಲಿ ರಸ್ತೆಗಳು ತೀರ ಹಾಳಾಗಿದ್ದು ಇದನ್ನು ಆದಷ್ಟು ಶೀಘ್ರದಲ್ಲಿ ದುರಸ್ಥಿ ಮಾಡಲಾಗುವುದೆಂದು ತಿಳಿಸಿದರು.


ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಭು, ವಾಡ್೯ ಸದಸ್ಯೆ ಕುಶಾಲ, ಸದಸ್ಯರಾದ ದಿವ್ಯಾ ಜಗದೀಶ್, ಸೌಮ್ಯ ಶೆಟ್ಟಿ, ಧನಲಕ್ಷ್ಮೀ, ಮಾಜಿ ಸದಸ್ಯ ದಿನೇಶ್ ಮಾರೂರು, ನಾಮ ನಿದೇ೯ಶಿತ ಸದಸ್ಯೆ ಸರಸ್ವತಿ, ಮುಖ್ಯಾಧಿಕಾರಿ ಇಂದು ಎಂ., ಎಂಜಿನಿಯರ್ ನಳಿನ್ ಕುಮಾರ್ ಪಿ, ಕಂದಾಯ ಅಧಿಕಾರಿ ಜ್ಯೋತಿ ಹೆಚ್, ಹಿರಿಯರು ಮತ್ತು ಗ್ರಾಮಸ್ಥರು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...