ಉಚಿತ ಹೊಲಿಗೆ ತರಬೇತಿ ಸಮಾರೋಪ

Date:

ಮೂಡುಬಿದಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮೂಡುಬಿದಿರೆ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ 3 ತಿಂಗಳ ಕಾಲ ನಡೆದ ಉಚಿತ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭವು ಶಿತಾ೯ಡಿ ಗ್ರಂಥಾಲಯ ಕಟ್ಟಡದಲ್ಲಿ ನಡೆಯಿತು.

ಯೋಜನಾಧಿಕಾರಿ ಧನಂಜಯ ಅವರು ಭಾಗವಹಿಸಿ ಮಾತನಾಡಿ ಸ್ವ ಉದ್ಯೋಗ ಕ್ಕೆ ಪ್ರೇರಣೆ ನೀಡುವ ಉದ್ದೇಶದಿಂದ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಹೊಲಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಿ ಹಾಗೂ ಸ್ವ ಉದ್ಯೋಗ ಘಟಕ ಪ್ರಾರಂಭಿಸಿ ಎಂದರು.

ಯೋಜನೆಯ ಮೂಡುಕೊಣಾಜೆ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಸುಧಾಕರ್ ಹೆಗ್ಡೆ ಅಧ್ಯಕ್ಷತೆ ಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಿತಾ೯ಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಭಾಗವಹಿಸಿದರು. ತಾಲೂಕು ಜನಜಾಗೃತಿ ವೇದಿಕೆಯ ಅಲಂಗಾರ್ ವಲಯದ ಸದಸ್ಯರಾದ ಲತಾ ಹೆಗ್ಡೆ, ಜಿಲ್ಲಾ ವಿಮಾ ಸಮನ್ವಯಧಿಕಾರಿ ಹೇಮಲತಾ ಹೆಗ್ಡೆ, ವಲಯದ ಮೇಲ್ವಿಚಾರಕ ಚಂದ್ರಹಾಸ, ಹೊಲಿಗೆ ತರಬೇತಿ ಶಿಕ್ಷಕಿ ಸುಕನ್ಯಾ ಉಪಸ್ಥಿತರಿದ್ದರು.

ಸುಮಾರು 28 ಶಿಬಿರಾ ರ್ಥಿಗಳು ಭಾಗವಹಿಸಿ ತರಬೇತಿ ಪಡೆಕೊಂಡರು.

ಸೇವಾಪ್ರತಿನಿಧಿ ಶಶಿರೇಖಾ ಸ್ವಾಗತಿಸಿದರು. ವೇದಾವತಿ ಹಾಗೂ ತಂಡದವರು ಪ್ರಾಥಿ೯ಸಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಕಾರ್ಯಕ್ರಮ ನಿರೂಪಿಸಿದರು.
ವಿನಯ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...