ಎಕ್ಸಲೆಂಟ್‌ನಿಂದ ಸ್ವಚ್ಛ ಗ್ರಾಮ ಸಂಕಲ್ಪ

Date:

ಮೂಡುಬಿದಿರೆ: ಪುರಸಭೆಯ ಸಹಯೋಗದಲ್ಲಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯು ಸ್ವಚ್ಛ ಗ್ರಾಮ ಸಂಕಲ್ಪ ಕೈಗೊಂಡಿದ್ದು ವಿದ್ಯಾರ್ಥಿಗಳಲ್ಲಿ ನಿರಂತರ ಸ್ವಚ್ಛತಾ ಅರಿವು ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾಲೇಜಿನ ಎನ್‌ಎಸ್‌ಎಸ್, ಎನ್‌ಸಿಸಿ, ರೇಂಜರ್ಸ್, ರೋವರ್‍ಸ್, ರೆಡ್‌ಕ್ರಾಸ್, ಸ್ಕೌಟ್ಸ್‌ಗೈಡ್ಸ್ ಸ್ವಯಂಸೇವಕರು ಬುಧವಾರ ಕೀರ್ತಿನಗರ ಸರ್ಕಲ್‌ನಿಂದ ಗಂಟಾಲ್‌ಕಟ್ಟೆಯವರೆಗೆ ಶ್ರಮದಾನದ ಮೂಲಕ ಸ್ವಚ್ಛತೆ ನಡೆಸಿದರು.

ಬಳಿಕ ಕಾಲೇಜಿನಲ್ಲಿ ನಡೆದ ಸ್ವಚ್ಛ ಗ್ರಾಮ ಸಂಕಲ್ಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗಂಟಾಲ್‌ಕಟ್ಟೆ ಚರ್ಚ್‌ನ ಧರ್ಮಗುರು ರೇ| ಫಾ. ರೊನಾಲ್ಡ್ ಪ್ರಕಾಶ್ ಡಿಸೋಜ ಮಾತನಾಡಿ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಮ್ಮ ಮನಸ್ಸು ಸ್ವಚ್ಛವಾಗಿರಬೇಕು. ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಸ್ವಚ್ಛತೆಯ ಪಾತ್ರ ಮಹತ್ವದ್ದಾಗಿದೆ ಎಂದರು.

ಪುರಸಭೆಯ ಮುಖ್ಯಾಧಿಕಾರಿ ಇಂದು ಎಂ., ಪರಿಸರ ಇಂಜಿನಿಯರ್ ಶಿಲ್ಪಾ ಸ್ವಚ್ಛತೆಯ ಪ್ರಾಮುಖ್ಯತೆಯನ್ನು ವಿವರಿಸಿದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರೆಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಯುವರಾಜ ಜೈನ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಡಾ. ವಾದಿರಾಜ ಕಲ್ಲೂರಾಯ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...