ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ: ಡಿ. 21ರಂದು ವಿವಿಧ ಸ್ಪಧೆ೯ಗಳು

Date:

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು, ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ 2026ರ ಜ17ರಂದು ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಆಶುಭಾಷಣ ಸ್ಪರ್ಧೆ, ಕನ್ನಡ ಗೀತೆ(ಸಮೂಹ ಗಾಯನ)ಮತ್ತು ಜಾನಪದ ಗೀತೆ(ವೈಯಕ್ತಿಕ)ಗಳೆಂಬ ಐದು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ.

ಸ್ಪರ್ಧೆಗಳನ್ನು ಡಿ. 21ರಂದು ವಿದ್ಯಾಗಿರಿಯಲ್ಲಿರುವ ಆಳ್ವಾಸ್ ಪದವಿ ಕಾಲೇಜಿನಲ್ಲಿ ನಡೆಸಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ದೃಢೀಕರಣದೊಂದಿಗೆ ತಮ್ಮ ಹೆಸರನ್ನು ಡಿ. 18 ರ ಒಳಗಾಗಿ ನೋಂದಾಯಿಸಿ ಪ್ರವೇಶ ಪತ್ರವನ್ನು ಪಡೆಯಲು ವಾಟ್ಸಪ್ ಸಂಖ್ಯೆ 9663180107 ಅಥವಾ ಇಮೇಲ್ kasapamoodubidiretalukghataka@gmail.com ಸಂಪರ್ಕಿಸಿರಿ ಎಂದು ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿಜೇತರಿಗೆ ಬಹುಮಾನಗಳನ್ನು ಹಾಗೂ ಭಾಗವಹಿಸಿದ ಎಲ್ಲರಿಗೂ ಪ್ರಮಾಣ ಪತ್ರಗಳನ್ನು ಸಾಹಿತ್ಯ ಸಮ್ಮೇಳನದಲ್ಲಿ ನೀಡಿ ಗೌರವಿಸಲಾಗುವುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...