ಮೂಡುಬಿದಿರೆ ಬಂಟರ ಸಂಘದಿಂದ ರೂ.12 ಲಕ್ಷ ವಿದ್ಯಾಥಿ೯ ವೇತನ ವಿತರಣೆ

Date:

ಮೂಡುಬಿದಿರೆ : ಇಲ್ಲಿನ ಬಂಟರ ಸಂಘ ವತಿಯಿಂದ ಹೋಟೆಲ್ ಪಂಚರತ್ನದಲ್ಲಿ ಶನಿವಾರ ನಡೆದ ಬಂಟ ಸಮಾಜ ಬಾಂಧವರ ಸಭೆ, ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಿತು.

ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿ ಜಾಗತಿಕ ಮಟ್ಟದಲ್ಲಿ ಬಂಟ ಸಮುದಾಯವನ್ನು ಗುರುತಿಸಿಕೊಳ್ಳಲು ಸಮೀಕ್ಷೆ ನಡೆಸಿ ನಮ್ಮವರ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವ ಎಲ್ಲಾ ವಿವರಗಳನ್ನು ಒಳಗೊಂಡ ವೆಬ್ಸೈಟ್ ನ್ನು ತಯಾರು ಮಾಡಲಾಗಿದ್ದು ಇದರ ಕೆಲಸ ಶೇ. 90 ಮುಗಿದಿದೆ. ಅತೀ ಶೀಘ್ರದಲ್ಲಿ ಈ ಮೂಲಕ ಎಲ್ಲರನ್ನು ಒಗ್ಗೂಡಿಸುವ ಕಾಯ೯ವನ್ನು ಮಾಡಲಾಗುತ್ತಿದ್ದು ಇದಕ್ಕೆ ಎಲ್ಲರೂ ಸಹಕರಿಸಬೇಕೆಂದರು.

ಮೂಡುಬಿದಿರೆ ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕ್ರಮದಲ್ಲಿ 425 ವಿದ್ಯಾಥಿ೯ಗಳಿಗೆ ರೂ. 12 ಲಕ್ಷ ವಿದ್ಯಾಥಿ೯ ವೇತನವನ್ನು ವಿತರಿಸಲಾಯಿತು.

ಬೆಂಗಳೂರು ಸತ್ಯವಾಣಿ ಸಮೂಹ ವಿದ್ಯಾ ಸಂಸ್ಥೆಯ ಡಾ. ದೇವಿ ಪ್ರಸಾದ್ ಶೆಟ್ಟಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ವಿದ್ಯಾಥಿ೯ಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ವಿದ್ಯೆಯತ್ತ ಗಮನ ಹರಿಸುವಂತೆ ಸಲಹೆ ನೀಡಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಹಿರಿಯರ ಮಾರ್ಗದರ್ಶನದಂತೆ ನಾವೆಲ್ಲರೂ ಜವಾಬ್ದಾರಿಯಿಂದ ಕಷ್ಟಪಟ್ಟು ದುಡಿದಲ್ಲಿ, ಸೂಕ್ತ ವಿದ್ಯೆಯನ್ನು ಪಡೆದು ಮುಂದುವರಿದಲ್ಲಿ ಸಾಧನೆಯನ್ನು ಮಾಡಲು ಸಾಧ್ಯವಿದೆ ಎಂದರು.

ಸನ್ಮಾನ : ಬಂಟರ ಮಹಿಳಾ ಘಟಕದ ಗೌರವಾಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಚಾಂಪಿಯನ್ ಕಡಂದಲೆಯ ನಮಿ ರೈ, ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವಿಭಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು.

ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್ ಹೆಗ್ಡೆ, ಗೌರವ ಸಲಹೆಗಾರರಾದಕಾಂತಿ ಲತಾ ಶೆಟ್ಟಿ, ಬಂಟರ ಸಂಘದ ಉಪಾಧ್ಯಕ್ಷ ಡಾ.ವಿನಯ ಕುಮಾರ್ ಹೆಗ್ಡೆ,ದಿನಕರ ಶೆಟ್ಟಿ, ದಿವಾಕರ ಶೆಟ್ಟಿ, ಜೊತೆ ಕಾಯ೯ದಶಿ೯ ಸುರೇಶ ಶೆಟ್ಟಿ, ಪ್ರೇಮನಾಥ ಮಾರ್ಲ ಉಪಸ್ಥಿತರಿದ್ದರು.

ಜತೆ ಕಾಯ೯ದಶಿ೯ ಕೆ. ಪಿ.ಸುಚರಿತ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ ಎಂ. ಪುರುಷೋತ್ತಮ ಶೆಟ್ಟಿ, ರಂಜಿತಾ ಶೆಟ್ಟಿ, ಹರಿಣಾಕ್ಷಿ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು.
ಶಿವ ಪ್ರಸಾದ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ವಕೀಲ ಚೇತನ್ ಕುಮಾರ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...