ಮುಡಿಪು: ಜೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Date:

ಮುಡಿಪುವಿನ ಜೆನಿತ್ ಇಂಗ್ಲಿಷ್ ಮೀಡಿಯಂ ಶಾಲೆಯ ವಾರ್ಷಿಕ ಅಥ್ಲೆಟಿಕ್ ಮೀಟ್‌ನ್ನು 27-11-25 ರಂದು ಹೂಹಾಕುವಕಲ್ಲು ಮೈದಾನದಲ್ಲಿ ಭವ್ಯವಾಗಿ ನಡೆಸಲಾಯಿತು.

ಕಾರ್ಯಕ್ರಮಕ್ಕೆ ಗೌರವ ಅತಿಥಿಯಾಗಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಿ. ರಾಜೇಶ್ ಹಾಗೂ ಅಂತರಾಷ್ಟ್ರೀಯ ಅಥ್ಲೀಟ್ ಸರಸ್ವತಿ ಕಾಮತ್ ಹಾಜರಿದ್ದರು.ಕಾರ್ಯಕ್ರಮದ ವೇದಿಕೆಯಲ್ಲಿ ಅಧ್ಯಕ್ಷರಾದ ಮಜೀದ್ ಎಂ ಎ , ಕರಸ್ಪಾಂಡೆಂಟ್ ನಹದ ಎಂ , ಆಡಳಿತಾಧಿಕಾರಿ ಮೊಯಿದೀನ್, ವಕೀಲರಾದ ಮಹಮ್ಮದ್ ಅಸ್ಗರ್, ಮುಖ್ಯೋಪಾಧ್ಯಾಯಿನಿ ಸಫೂರಾ, ಪಿಟಿಎ ಅಧ್ಯಕ್ಷ ಹನೀಫ್ ಹಾಗೂ ಹಿತೈಷಿ ಹಸನ್ ಉಪಸ್ಥಿತರಿದ್ದರು.

ಮಕ್ಕಳು ವಿವಿಧ ಅಥ್ಲೆಟಿಕ್ ಸ್ಪರ್ಧೆಗಳಲ್ಲಿ ಅದ್ಭುತ ಪ್ರದರ್ಶನ ನೀಡಿದರು. ಓಟ, ಲಾಂಗು ಜಂಪ್, ಥ್ರೋ ಬಾಲ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಮೆರೆದಿತ್ತು . ಪಾಲಕರಿಗಾಗಿ ಆಯೋಜಿಸಿದ ಮನರಂಜನಾ ಆಟಗಳು ಮತ್ತು ಹಳೆಯ ವಿದ್ಯಾರ್ಥಿಗಳ ಅಲ್ಯೂಮಿನಿ ಪಂದ್ಯಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ಹೆಚ್ಚಿಸಿವೆ.ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಶಿಕ್ಷಕ-ಶಿಕ್ಷಕಿಯರು ಹಾಗೂ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...