ಮುಡಿಪು: ರಸ್ತೆ ಕಾಮಗಾರಿ ವಿಳಂಬ ಖಂಡಿಸಿ ಸಾರ್ವಜನಿಕ ಸಹಿ ಸಂಗ್ರಹ

Date:


ಮುಡಿಪು: ನವೋದಯದಿಂದ ಮುದುಂಗಾರು ಕಟ್ಟೆ–ಪಾತೂರು ಸಂಪರ್ಕಿಸುವ ಮುಖ್ಯ ರಸ್ತೆಯ ಕಾಮಗಾರಿ ವಿಳಂಬ ವಾಗುತ್ತಿರುವುದನ್ನು ಖಂಡಿಸಿ, ನಾಗರಿಕ ಹೋರಾಟ ಸಮಿತಿ ಮುದುಂಗಾರು ಕಟ್ಟೆ–ಬಾಳೆಪುಣಿ ವತಿಯಿಂದ ಇಂದು ಸಾರ್ವಜನಿಕ ಸಹಿ ಸಂಗ್ರಹ ಕಾರ್ಯಕ್ರಮ ನಡೆಯಿತು.


ನಂತರ ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿ, ಕೆಲವೇ ದಿನಗಳಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಗಡುವು ನೀಡಲಾಯಿತು. ರಸ್ತೆ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಯಿತು.


ಕಾರ್ಯಕ್ರಮದಲ್ಲಿ ಊರಿನ ಗ್ರಾಮಸ್ಥರು ಹಾಗೂ ನಾಗರಿಕ ಹೋರಾಟ ಸಮಿತಿಯ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು.


ಈ ಸಂದರ್ಭದಲ್ಲಿ ನಾಗರಿಕ ಹೋರಾಟ ಸಮಿತಿ ಸದಸ್ಯರಾದ ಉಸ್ಮಾನ್ ಅಲ್ತಾಫ್, ಅಬ್ದುಲ್ ಅಝೀಜ್, ಅಬೂಬಕ್ಕರ್ ಜಲ್ಲಿ, ದಿವಾಕರ ಆರಂತಾಡಿ, ಪ್ರದೀಪ್ ಆರಂತಾಡಿ, ಕೇಶವ ಶೆಟ್ಟಿಗಾರ್, ಅಸ್ಪಾಕ್ ಕಾಚರಮಾರ್, ಖಲೀಲ್ ಸಿ. ಹೆಚ್, ಅಶ್ರಫ್ ಯು. ಎಮ್, ಅನ್ಸಾರ್ SAIM, ಇಕ್ಬಾಲ್ ಸೆಲ್ ನೆಟ್, ರವೂಫ್ ಯು. ಎಮ್, ಸಿದ್ದೀಕ್ ಎಂ. ಕೆ, ಉಸ್ಮಾನ್ ಎಂ.ಕೆ, ಶಿವಪ್ರಸಾದ್ ನಾರ್ಯ, ಸುರೇಶ್ ಶೆಟ್ಟಿಗಾರ್, ಲತೀಫ್ ಕಡ್ವಾಯಿ ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

IPS ಅಧಿಕಾರಿಯ ವಿರುದ್ಧ SP ಗಂಭೀರ ಆರೋಪ – DGP ಗೆ ಪತ್ರ ಬರೆದು, “30 ನಿಮಿಷ ಕೊಡಿ, ಸತ್ಯ ಬಯಲು ಮಾಡ್ತೇನೆ” ಎಂದು ಉಲ್ಲೇಖ…!!!

ಮಾನಸಿಕ ಕಿರುಕುಳ, ತಾರತಮ್ಯ ಆರೋಪ; ಪೊಲೀಸ್ ಇಲಾಖೆಯಲ್ಲಿ ಸಂಚಲನ ಬೆಂಗಳೂರು: ಕರ್ನಾಟಕ ಪೊಲೀಸ್...

ಬಳ್ಕುಂಜೆಯಲ್ಲಿ ಕುದಿ ಕಂಬಳ: ಹೊಳೆಗೆ ಹಾರಿ ಪ್ರಾಣಬಿಟ್ಟ ದೂಜ

ಮೂಡುಬಿದಿರೆ: ಕಂಬಳದ ಕನೆ ಹಲಗೆ ವಿಭಾಗದಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡಿದ್ದ ತಿರುವೈಲು...

ಲೇಖಕಿ ರೆಶೆಲ್ ಫೆರ್ನಾಂಡಿಸ್ ಅವರಿಗೆ ದಿವಾ ಪ್ಲಾನೆಟ್ ವತಿಯಿಂದ ಟಾಪ್ 50 ಗಮನಾರ್ಹ ಮಹಿಳಾ ಗೌರವ

ರೆಶೆಲ್ ಬ್ರೆಟ್ನಿ ಫೆರ್ನಾಂಡಿಸ್ ಪ್ರಮುಖ ಯುವ ಲೇಖಕಿ ಮತ್ತು ವಾಗ್ಮಿ, ಎಬಿವಿಪಿ...

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ...