ಮೂಲ್ಕಿ: ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಲಿಷ್ಠವಾಗಿ ಸಂಘಟಿತರಾಗಬೇಕಾದರೆ ಪಕ್ಷದ ನಾಯಕರುಗಳು, ಕಾರ್ಯಕರ್ತರುಗಳು ಪಕ್ಷದ ಕೆಲಸ ಕಾರ್ಯಗಳನ್ನು ಯಶಸ್ವಿಗೊಳಿಸಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ಹೇಳಿದರು.

ಅವರು ಬೆಂಗಳೂರು ಗೃಹ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಬಿ. ಕೆ. ಹರಿಪ್ರಸಾದ್ ರವರನ್ನು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ನ ನಿಯೋಗವು ಭೇಟಿ ಮಾಡಿ ಅವರನ್ನು ಅಭಿನಂದಿಸಿದಾಗ ಪ್ರತಿಕ್ರಿಯಿಸಿದರು. ನಿಯೋಗದಲ್ಲಿ ಬ್ಲಾಕ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಸದಸ್ಯ ಎಚ್ . ವಸಂತ ಬರ್ನಾಡು, ಮೂಲ್ಕಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಕೋಟ್ಯಾನ್, ಹಳೆಯಂಗಡಿ ಪ್ರಜಾಪ್ರತಿನಿಧಿ ಅಧ್ಯಕ್ಷ ಅನಿಲ್ ಪೂಜಾರಿ ಸಸಿ ಹಿತ್ಲು, ಕಾರ್ಯದರ್ಶಿ ಅಬ್ದುಲ್ ಅಜೀಜ್, ಮೂಲ್ಕಿ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯ ಸುಭಾಷ್ ಚಂದ್ರ ಕೆ.ಎಸ್. ಜೊತೆಗಿದ್ದರು.


