
ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್ನ ನೂತನ ಉಪಾಧ್ಯಕ್ಷರಾಗಿ ವಿ. ಇಬ್ರಾಹಿಂ ನಡುಪದವು ಅವರು ಆಯ್ಕೆಯಾಗಿದ್ದಾರೆ.
ಸಂಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಇಬ್ರಾಹಿಂ ನಡುಪದವು ಅವರಿಗೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಹೊಸ ಜವಾಬ್ದಾರಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ಬ್ಯಾರಿ ಸಮುದಾಯದ ಅಭಿವೃದ್ಧಿ ಹಾಗೂ ಸಂಘಟನೆಯ ಬಲವರ್ಧನೆಗೆ ಕೊಡುಗೆ ನೀಡಲಿ ಎಂದು ಶುಭ ಹಾರೈಸಿದ್ದಾರೆ.


