ಪ್ರಚೋದನಕಾರಿ ಹೇಳಿಕೆ; ನರಸಿಂಹ ಶೆಟ್ಟಿ ಮಾಣಿ ವಿರುದ್ಧ ಪ್ರಕರಣ ದಾಖಲು

Date:

►ಪೆರ್ನೆಯಲ್ಲಿ ದನ ಕಳವು ಪ್ರಕರಣ

ಬಂಟ್ವಾಳ : ಪೆರ್ನೆಯಲ್ಲಿ ದನ ಕಳವು ಮಾಡಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡು ಕೋಮು ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೆ 4 ರಂದು ರಾತ್ರಿ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಎಂಬಾತನು ಮಾತನಾಡುವ ವೇಳೆ, ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮಗಳ ನಡುವೆ  ಕೋಮು ದ್ವೇಷ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವುದು ತಿಳಿದುಬಂದಿದೆ.

ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 132/2025 ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...