ಬಂಟ್ವಾಳ: ವಿಧಾನಸಭಾ ಕ್ಷೇತ್ರದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ “ನರೇಗಾ ಮರಳಿಸಿ – ಉದ್ಯೋಗದ ಹಕ್ಕು ಉಳಿಸಿ” ಎಂಬ ಘೋಷಣೆಯೊಂದಿಗೆ ನರೇಗಾ ಬಚಾವೋ ಸಂಗ್ರಾಮ ಬೃಹತ್ ಪಾದಯಾತ್ರೆ ನಡೆಯಿತು. ಮಾಜಿ ಸಚಿವರಾದ ಶ್ರೀ ಬಿ. ರಮನಾಥ ರೈ ಅವರ ನೇತೃತ್ವದಲ್ಲಿ ನಡೆದ ಈ ಪಾದಯಾತ್ರೆ ಮೂಲಕ, ನರೇಗಾ ಯೋಜನೆಯನ್ನು ದುರ್ಬಲಗೊಳಿಸುತ್ತಿರುವ ಕೇಂದ್ರ ಸರಕಾರದ ಜನವಿರೋದಿ ನೀತಿಗೆ ತೀವ್ರ ವಿರೋಧ ವ್ಯಕ್ತಪಡಿಸಲಾಯಿತು.

ಪಾದಯಾತ್ರೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ದಕ್ಷಿಣ ಕನ್ನಡ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರಶೆಟ್ಟಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನರೇಗಾ ಯೋಜನೆಯನ್ನು ಮೂಲ ಸ್ವರೂಪದಲ್ಲೇ ಮುಂದುವರಿಸುವಂತೆ ಆಗ್ರಹಿಸಿದರು.


