ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್: ಜಿಲ್ಲೆಯ ಐವರು ವಿದ್ಯಾರ್ಥಿಗಳಿಗೆ ಪದಕ

Date:

ಮಂಗಳೂರು: ಭಾರತೀಯ ಸ್ಕ್ವೇಯ್ ಸಂಸ್ಥೆಯು ತೆಲಂಗಾಣ ರಾಜ್ಯದ ಹೈದರಾಬಾದ್ ನ ಬಾಲಯೋಗಿ ಗಚಿ ಬೌಲಿ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಿದ್ದ 26 ನೇ ರಾಷ್ಟ್ರಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಜಿಲ್ಲೆಯ 11 ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದಿಂದ ಪ್ರತಿನಿಧಿಸಿ ಒಂದು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕವನ್ನು ಪಡೆದು ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.


ಮುಹಮ್ಮದ್ ನಹ್ಯಾನ್ ಅಬೂಬಕ್ಕರ್ 11 ವರ್ಷ ವಯೋಮಿತಿಯ 27 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದು ಅಕ್ಟೋಬರ್ ನಲ್ಲಿ ಕಿರ್ಗಿಸ್ತಾನ್ ನಲ್ಲಿ ನಡೆಯಲಿರುವ ಏಷ್ಯನ್ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಗೆ ಆಯ್ಕೆಯಾದರೆ ನಿಗಮ್ ಜೈನ್ 18 ವರ್ಷ ಕೆಳಗಿನ ವಯೋಮಿತಿಯ 52 ಕೆಜಿ ವಿಭಾಗದಲ್ಲಿ ಕಂಚಿನ ಪದಕ, ಯತೀಂದ್ರ ಎ. 56 ಕೆಜಿ ವಿಭಾಗದಲ್ಲಿ ಕಂಚಿನ ಪದಕ, ಸುಲೈಮಾನ್ ಮುಹಮ್ಮದ್ ಶಾಹಿಲ್ 18 ವರ್ಷ ಮೇಲ್ಪಟ್ಟ 50 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.

ಹುಡುಗಿಯರ ವಿಭಾಗದಲ್ಲಿ ಆಯಿಷತುಲ್ ನಾಫಿಯಾ 30 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ. ಇವರೆಲ್ಲರೂ ಜಿಲ್ಲಾ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸಂಸ್ಥೆಯ ಮುಹಮ್ಮದ್ ನದೀಮ್, ಸರ್ಫ್ರಾಝ್ ಅಬ್ದುಲ್ ಖಾದ್ರಿ, ಅಬ್ದುಲ್ ರಹಮಾನ್‌ ಹಾಗೂ ರಾಜೇಶ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...