ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗಗಳಿಂದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Date:

ಮೂಡುಬಿದಿರೆ: ವಿಜ್ಞಾನವೆಂಬುದು ನಿನ್ನೆ, ಇಂದಿನ ಮತ್ತು ನಾಳೆಯ ನಡುವೆ ಸೇತುವೆಯಾಗಿರುವ ಶಕ್ತಿ. ಪ್ರಕೃತಿಯ ಸೌಂದರ್ಯವನ್ನು ಅರಿತು ಅನುಭವಿಸುವುದೇ ವಿಜ್ಞಾನ. ಶ್ರಮ, ಸಮರ್ಪಣೆ ಮತ್ತು ಕ್ರಮಬದ್ಧ ಅಧ್ಯಯನದ ಮೂಲಕ ಯಾವುದೇ ವಿದ್ಯಾರ್ಥಿಯೂ ಉತ್ತಮ ವಿಜ್ಞಾನಿಯಾಗಬಹುದು ಎಂದು ಉಡುಪಿ ಶ್ರೀ ಅದಮಾರು ಮಠ ಶಿಕ್ಷಣ ಪರಿಷತ್ತಿನ ಬೆಂಗಳೂರಿನ ಶಾಖೆಯ ಗೌರವ ಕಾರ್ಯದರ್ಶಿ ಡಾ ಎಸ್ ಅನಂತ ಪದ್ಮನಾಭ ಭಟ್ ಅಭಿಪ್ರಾಯಪಟ್ಟರು.


ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗಗಳು ಕುವೆಂಪು ಸಭಾಂಗಣದಲ್ಲಿ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ನಿಜವಾದ ರಾಷ್ಟ್ರೀಯತೆ ಕೇವಲ ಮಾತುಗಳಲ್ಲಿ ವ್ಯಕ್ತವಾಗುವುದಲ್ಲ, ಅದು ಸಂಶೋಧನೆ ಮತ್ತು ಆವಿಷ್ಕಾರಗಳ ಮೂಲಕ ರೂಪುಗೊಳ್ಳಬೇಕು. ದೇಶದ ಭವಿಷ್ಯವು ವಿಜ್ಞಾನದ ಬೆಳವಣಿಗೆಯನ್ನು ಅವಲಂಬಿಸಿದೆ. ಜ್ಞಾನವನ್ನು ಎಷ್ಟು ಆಳವಾಗಿ ಅನ್ವೇಷಿಸುತ್ತೇವೋ ಅಷ್ಟೇ ಹೊಸ ಸಾಧನೆಗಳು ಮತ್ತು ಅನ್ವೇಷಣೆಗಳು ಹೊರಹೊಮ್ಮುತ್ತವೆ ಎಂದು ಅಭಿಪ್ರಾಯಪಟ್ಟರು.


ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ವಿಜ್ಞಾನವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗಿರದೆ ಜನಜೀವನದಲ್ಲಿ ಅನ್ವಯವಾಗಬೇಕು. ಶಿಕ್ಷಣವು ವೈಜ್ಞಾನಿಕ ಮನೋಭಾವ, ವಿಚಾರಶೀಲತೆ ಹಾಗೂ ಪ್ರಶ್ನಿಸುವ ಧೈರ್ಯವನ್ನು ಬೆಳೆಸುವಂತಿರಬೇಕು ಎಂದರು.
ಈ ಸಂದರ್ಭದಲ್ಲಿ ಸ್ನಾತಕೋತ್ತರ ವಿಜ್ಞಾನ ವಿಭಾಗಗಳಿಂದ ಆಯೋಜಿಸಲ್ಪಟ್ಟ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸುಕೇಶ್, ವಿವಿಧ ವಿಭಾಗಗಳ ಉಪನ್ಯಾಸಕರು, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ತೃತೀಯ ಬಿಎಸ್ಸಿಯ ಶ್ರಾವ್ಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಿನೆಟ್ ವಾಸ್ ಅತಿಥಿಯನ್ನು ಪರಿಚಯಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ವಸುಧಾ ಭಟ್ ಸ್ವಾಗತಿಸಿ, ಜೈವಿಕ ತಂತ್ರಜ್ಞಾನ ವಿಭಾಗದ ಉಪನ್ಯಾಸಕ ಯೋಗೇಂದ್ರ ಎನ್. ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...