ನ.15: ಪಣಪಿಲದಲ್ಲಿ 16 ನೇ ವರುಷದ ‘ಜಯ-ವಿಜಯ’ ಜೋಡುಕರೆ ಕಂಬಳ

Date:

ಮೂಡುಬಿದಿರೆ : ಇಲ್ಲಿನ ಪಣಪಿಲದಲ್ಲಿ ಜೋಡುಕರೆ ಕಂಬಳ ಸಮಿತಿಯ ವತಿಯಿಂದ 16ನೇ ವರುಷದ ಹೊನಲು ಬೆಳಕಿನ ‘ಜಯ-ವಿಜಯ’ ಜೋಡುಕರೆ ಕಂಬಳವು ನ.15 ರಂದು ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಂದೊಟ್ಟು ಪಣಪಿಲ ಯುವರಾಜ್ ಜೈನ್ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮಿತಿಯ ಕಾಯ೯ಧ್ಯಕ್ಷ ಕೆಲ್ಲಪುತ್ತಿಗೆ ಗುತ್ತು ಸುಭಾಶ್ಚಂದ್ರ ಚೌಟ ಅವರು ಈ ಬಗ್ಗೆ ಮಾಹಿತಿ ನೀಡಿ ಮಾತನಾಡಿ ಪಣಪಿಲ ಕಂಬಳವು ಕಳೆದ 15 ವರುಷಗಳಿಂದಲೂ ಉತ್ತಮವಾಗಿ ನಡೆದುಕೊಂಡು ಬಂದಿದೆ. ಇದೀಗ 16ನೇ ವರುಷದ ಕಂಬಳಕ್ಕೆ ಸಿದ್ಧತೆ ನಡೆಯುತ್ತಿದ್ದು, ಕಳೆದ ಒಂದು ತಿಂಗಳಿಂದ ಕಂಬಳ ಕರೆ ಮತ್ತು ಆ ಪರಿಸರದಲ್ಲಿ ಕಂಬಳ ಸಮಿತಿ ಸದಸ್ಯರು ಮತ್ತು ಊರ ಸ್ವಯಂ ಸೇವಕರು ಕಂಬಳದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ, ಅಚ್ಚುಕಟ್ಟಿನ ವ್ಯವಸ್ಥೆಗಳು ನಡೆಯುತ್ತಿದೆ.ಕಂಬಳಕ್ಕೆ ಚಿತ್ರ ನಿರ್ಮಾಪಕ, ಉದ್ಯಮಿ ಲಾಂಚುಲಾಲ್ ಹಾಗೂ ದಾನಿಗಳ ನೆರವಿನಿಂದ ಪ್ರೋತ್ಸಾಹದೊಂದಿಗೆ ಕಂಬಳ ಯಶಸ್ವಿಯಾಗಿ ನಡೆಯಲಿದೆ ಎಂದರು.

ಸುಮಾರು 160 ಜತೆ ಕೋಣಗಳು ಈ ಕಂಬಳದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹಳ್ಳಿಯ ಕೂಟ ಎಂಬ ಕಂಬಳ ಇಂದಿಗೆ ಉಳಿದುಕೊಂಡಿದೆ ಎಂದರೆ ಅದು ಪಣಪಿಲ ಕಂಬಳ ಎಂದು ಹೇಳಿದರು.ಉಪಾಧ್ಯಕ್ಷ ಮುನಿರಾಜ್ ಹೆಗ್ಡೆಯವರು ಕಂಬಳ ಪ್ರೋತ್ಸಾಹಕರ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ಅಶ್ವಥ್ ಕೆ.ಪಣಪಿಲ ಅವರು ಸ್ವಾಗತಿಸಿ ಪಣಪಿಲ ಕಂಬಳದ ಕುರಿತು ಮತ್ತು ಅಲ್ಲಿನ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...