‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

Date:

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ ‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆಧ್ಯಾತ್ಮಿಕ ಜಾಥಾಕ್ಕೆ ಪಾನೀರ್ ಮೆರ್ಸಿಯಮ್ಮ ಚರ್ಚ್ ಬಳಿ ಚಾಲನೆ ನೀಡಲಾಯಿತು. ವಿದಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಪಾನೀರ್ ಚರ್ಚ್ ನಿಂದ ಮುಡಿಪು ಚರ್ಚ್ ವರೆಗಿನ ಭಕ್ತಿಪೂರ್ವ ನಡಿಗೆಯಿಂದ ಕೇವಲ ಪಾಲ್ಗೊಂಡವರಿಗೆ ಮಾತ್ರವಲ್ಲದೆ ಊರಿಗೇ ಶಾಂತಿ, ನೆಮ್ಮದಿ ಲಭಿಸಲಿದೆ ಎಂದು ಹೇಳಿದರು.

ಆಶೀರ್ವಚನ ನೀಡಿದ ಪೆರ್ಮನ್ನೂರು ಸಂತ ಸೆಬೆಸ್ಟಿಯನ್ ಚರ್ಚ್ ಧರ್ಮಗುರು ಅತಿ ವಂದನೀಯ ಫಾದರ್ ಸಿಪ್ರಿಯನ್ ಪಿಂಟೋ, ಕಠಿಣ ಬಿಸಿಲಿನಲ್ಲಿ ಉಪವಾಸಧಾರಿಗಳಾಗಿ ಪುಣ್ಯ ಕ್ಷೇತ್ರದೆಡೆಗಿನ ನಡಿಗೆಯಿಂದ ಪ್ರತಿಯೊಬ್ಬರ ಮನ, ಸಮಾಜ, ಸಮುದಾಯದಲ್ಲಿ ಶಾಂತಿ, ಸಾಮರಸ್ಯ ಮೂಡಲಿದೆ ಎಂದು ತಿಳಿಸಿದರು. ಪಾನೀರ್ ಚರ್ಚ್ ಧರ್ಮಗುರು ಫಾ.ವಿಕ್ಟರ್ ಡಿಮೆಲ್ಲೋ ನಡಿಗೆಗೆ ಚಾಲನೆ ನೀಡಿದರು.

ಮುಡಿಪು ಚರ್ಚ್ ಪ್ರಧಾನ ಧರ್ಮಗುರು ಫಾ.ಆಸಿಸ್ಸಿ ರೆಬೆಲ್ಲೋ, ಬೋಳ ಚರ್ಚ್ ಧರ್ಮಗುರು ಪೀಟರ್ ಡಿಸೋಜ, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ, ಕಥೊಲಿಕ್ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಷ ಸಂತೋಷ್ ಡಿಸೋಜ ಪಿಆರ್ ಒ ರಾಲ್ಫಿ ಡಿಕೋಸ್ತ, ಕಾರ್ಯದರ್ಶಿ ವಿಲ್ಮಾ ಮೊಂತೆರೋ, ಪತ್ರಕರ್ತ ವಾಲ್ಟರ್ ನಂದಳಿಕೆ, ಪಾನೀರ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಉರ್ಬನ್ ಫೆರಾವೋ, ಕಾರ್ಯದರ್ಶಿ ವಿನ್ನಿ ಕುಟಿನ್ಹಾ, ಮುಡಿಪು ಸಂತ ಜೋಸೆಫ್ ವಾಝ್ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಅರುಣ್ ಡಿಸೋಜ, ಕಾರ್ಯದರ್ಶಿ ರೋಶನ್ ಡಿಸೋಜ, ಕಥೊಲಿಕ್ ಸಭಾ ದಕ್ಷಿಣ ವಲಯ ಕಾರ್ಯದರ್ಶಿ ಟ್ರೆಸ್ಸಿ ರೋಡ್ರಿಗಸ್, ಪಾನೀರ್ ಘಟಕಾಧ್ಯಕ್ಷ ಐವನ್ ಮೊಂತೆರೋ ಉಪಸ್ಥಿತರಿದ್ದರು.

ಕಥೊಲಿಕ್ ಸಭಾ ಮಂಗಳೂರು ಪ್ರದೇಶ ಅಧ್ಯಕ್ಷ ಡಾಲ್ಫಿ ಡಿಸೋಜ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಆಲ್ವಿನ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಥೊಲಿಕ್ ಸಭಾ ಕೋಶಾಧಿಕಾರಿ ಫೆಲಿಕ್ಸ್ ಡಿಸೋಜ ಅಮ್ಮೆಂಬಳ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....