ಪಿ.ಎ.ಕಾಲೇಜಿನಲ್ಲಿ ಕಾರ್ಯಾಗಾರ ಉದ್ಘಾಟನೆ ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ ಮಹತ್ವದ್ದು: ಡಾ. ಪ್ಯಾಸ್ಕಲ್ ಎನ್. ಟೈರೆಲ್

Date:

ಕೊಣಾಜೆ: ಕೃತಕ‌ ಬುದ್ದಿಮತ್ತೆಯು ಕೇವಲ ತಾಂತ್ರಿಕ ಪ್ರಗತಿ ಮಾತ್ರವಲ್ಲ, ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚುತ್ತಿರುವ ಆರೋಗ್ಯ ರಕ್ಷಣೆ ಬೇಡಿಕೆಗಳು, ರೋಗಗಳ ಆರಂಭಿಕ ಪತ್ತೆ ಮತ್ತು ನಿಖರ ಔಷಧದಂತಹ ಸವಾಲುಗಳನ್ನು ಎದುರಿಸುವಲ್ಲಿ ಇದು ಅತ್ಯಗತ್ಯವಾದ ಸಾಧನವಾಗಿ ರೂಪುಗೊಳ್ಳುತ್ತಿದೆ ಎಂದು ಪ್ರಸಿದ್ಧ ಡೇಟಾ ವಿಜ್ಞಾನಿ, ಸಂಶೋಧಕ ಮತ್ತು ನಾವೀನ್ಯಕಾರ ಡಾ. ಪ್ಯಾಸ್ಕಲ್ ಎನ್. ಟೈರೆಲ್ ಅವರು ಹೇಳಿದರು.

ಅವರು ಪಿಎ ಕಾಲೇಜ್ ಆಫ್ ಎಂಜಿನಿಯರಿಂಗ್‌ನ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗಗಳ ಐಇಇಇ, ಡಬ್ಲ್ಯುಐಇ, ಐಐಸಿ ಸಹಯೋಗದೊಂದಿಗೆ ಇತ್ತೀಚೆಗೆ ನಡೆದ “ಆರೋಗ್ಯ ರಕ್ಷಣೆಯಲ್ಲಿ ಕೃತಕ ಬುದ್ಧಿಮತ್ತೆ” ಎಂಬ ವಿಷಯದ ಕುರಿತು ನಡೆದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ‌ ಮಾತನಾಡಿದರು.
ಪ್ರಪಂಚದಾದ್ಯಂತ ಆಧುನಿಕ ಔಷಧ ಮತ್ತು ಆರೋಗ್ಯ ವ್ಯವಸ್ಥೆಗಳ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ (AI) ಬೆಳೆಯುತ್ತಿರುವ ಪಾತ್ರದ ಕುರಿತು ಅಮೂಲ್ಯವಾದ ಮಾಹಿತಿಗಳನ್ನು ಅವರು ಹಂಚಿಕೊಂಡರು.
ಪ್ರಾಂಶುಪಾಲರಾದ ಡಾ. ರಮಿಸ್ ಎಂಕೆ, ಉಪ ಪ್ರಾಂಶುಪಾಲರಾದ ಡಾ. ಶರ್ಮಿಳಾ ಕುಮಾರಿ ಎಂ, ಪಿಎಇಟಿಯ ಎಜಿಎಂ ಶರ್ಫುದ್ದೀನ್, ಮಂಗಳೂರು ವಿಶ್ವವಿದ್ಯಾಲಯದ ಪಿಜಿ ಮತ್ತು ಸಂಶೋಧನಾ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ. ಬಿ ಎಚ್ ಶೇಖರ್, ಪಿಎ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್, ಎಐಎಂಎಲ್ ವಿಭಾಗದ ಮುಖ್ಯಸ್ಥ ಡಾ. ಮೊಹಮ್ಮದ್ ಜಾಕೀರ್ ಬಳ್ಳಾರಿ ಉಪಸ್ಥಿತರಿದ್ದರು.
ಗೌರವ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಎಚ್ ಎಲ್ ಶಶಿರೇಖಾ, ಮೈಸೂರಿನ ಸುಯೋಗ್ ಆಸ್ಪತ್ರೆಯ ಜನರಲ್ ಫಿಸಿಶಿಯನ್ ಡಾ. ಪೊನ್ನಪ್ಪ ಬಿ ಜಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...