ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ. ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ. ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ ಬಿದ್ದಿದ್ದಾನೆನ್ನಲಾಗಿದೆ. ಎರಡು ದಿನ ಕಳೆದ ನಂತರ ಅಂದರೆ ಇಂದು ( ಗುರುವಾರ) ಮೃತದೇಹ ಪತ್ತೆಯಾಗಿದ್ದು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



