ರಾಷ್ಟ್ರೀಯ ಗೌರವ ಐಕಾನ್ ಪ್ರಶಸ್ತಿ’ಗೆ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಆಯ್ಕೆ

Date:


ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ‘ರಾಷ್ಟ್ರೀಯ ಗೌರವ ಐಕಾನ್ ಅವಾರ್ಡ್ ಫಾರ್ ಸೋಶಿಯಲ್ ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು 2026ರ ಆಗಸ್ಟ್ 23ರಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯ ಹೋಟೆಲ್ ಸಮ್ರಾಟ್‌ನಲ್ಲಿ ನಡೆಯಲಿದೆ.
ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಅವರ ಸಮರ್ಪಣೆ, ನಿರಂತರ ಪರಿಶ್ರಮ ಹಾಗೂ ಸಮಾಜಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗ್ಲೋಬಲ್ ಅಚೀವರ್ಸ್ ಕೌನ್ಸಿಲ್ ತಿಳಿಸಿದೆ.
ಈ ಗೌರವಕ್ಕೆ ಆಯ್ಕೆಯಾಗಿರುವ ಶ್ರೀ ಪ್ರವೀಣ್ ಕುಮಾರ್ ಕೋಡಿಯಾಲ್ ಬೈಲ್ ಅವರಿಗೆ ಗಣ್ಯರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದು, ಅವರ ಸಾಮಾಜಿಕ ಸೇವಾ ಕಾರ್ಯಗಳು ಮತ್ತಷ್ಟು ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದ್ದಾರೆ…..

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...