ಡಿ 28ರಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು–ಸಾಲೆತ್ತೂರು ಇದರ ವತಿಯಿಂದ ಅಂಬುಲೆನ್ಸ್ ಸೇವೆ ಲೋಕಾರ್ಪಣೆ

Date:

ವಿಟ್ಲ: ಸಾಮಾಜಿಕ ಸೇವೆ ಮತ್ತು ಮಾನವೀಯತೆಯನ್ನು ಆಧಾರವಾಗಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವ ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಕೊಳ್ನಾಡು – ಸಾಲೆತ್ತೂರು ಇದರ ವತಿಯಿಂದ ಸಾರ್ವಜನಿಕ ಸೇವೆಗೆ ಸಮರ್ಪಿತ ಆಂಬುಲೆನ್ಸ್ ವಾಹನದ ಲೋಕಾರ್ಪಣೆ ಕಾರ್ಯಕ್ರಮ ಇದೇ ಡಿಸೆಂಬರ್ 28ರ ಆದಿತ್ಯವಾರದಂದು ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆಯಲಿದೆ.

ಈ ಆಂಬುಲೆನ್ಸ್ ಸೇವೆ ತುರ್ತು ಅಪಘಾತ ಪರಿಸ್ಥಿತಿಯಲ್ಲಿ ಗ್ರಾಮಸ್ಥರು, ಸುತ್ತಮುತ್ತಲಿನ ಪ್ರದೇಶದ ಜನತೆ, ಅಗತ್ಯವಿರುವ ರೋಗಿಗಳು ಹಾಗೂ ಸಾಮಾಜಿಕ ಕಾರ್ಯಗಳಿಗೆ ಯಾವ ಸಮಯದಲ್ಲಾದರೂ ಲಭ್ಯವಾಗುವಂತೆ ಟ್ರಸ್ಟ್ ವತಿಯಿಂದ ವ್ಯವಸ್ಥೆ ಮಾಡಲಾಗಿದೆ.

ಜನತಾ ಸೇವೆಯನ್ನು ಕಣ್ಮಣಿಯಾಗಿ ಕಾಣುವ ಉದ್ದೇಶದಿಂದ ಈ ಯೋಜನೆ ರೂಪುಗೊಂಡಿದ್ದು, ಇದರಿಂದ ಸಾಮಾನ್ಯ ಜನರಿಗೆ ವೇಗವಾದ ಮತ್ತು ಭದ್ರ ವೈದ್ಯಕೀಯ ತುರ್ತು ಬೆಂಬಲ ದೊರೆಯುವ ನಿರೀಕ್ಷೆ ಇದೆ.

ಈ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಬೆಳಕು ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಖಾದರ್ ಸಾಲೆತ್ತೂರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...