ಮನೆ ಅವರಣದ ಬಾವಿಗೆ ಬಿದ್ದು ನರಿಂಗಾನ ಕಲ್ಲರಕೋಡಿ ಶಾಲಾ ದೈಹಿಕ ಶಿಕ್ಷಕ ಆತ್ಮಹತ್ಯೆ..?

Date:

ಮಗಳ ಶಾಲಾ ವಾರ್ಷಿಕೋತ್ಸವದಂದೇ ಘಟನೆ.ನರ ದೌರ್ಬಲ್ಯದಿಂದ ನೊಂದು ಸಾವಿಗೆ ಶರಣಾಗಿರುವ ಶಂಕೆ.


ಉಳ್ಳಾಲ:ಡಿ.20: ನರಿಂಗಾನ ಗ್ರಾಮದ ಕಲ್ಲರಕೋಡಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಭಾಕರ್ ಜೋಗಿ(51) ಎಂಬವರು ಕೋಟೆಕಾರು ಪಟ್ಟಣ ವ್ಯಾಪ್ತಿಯ ಕೊಂಡಾಣದ ತನ್ನ ಮನೆ ಆವರಣದ ಬಾವಿಯಲ್ಲಿ ಶುಕ್ರವಾರ ಸಂಜೆ ಶವವಾಗಿ ಪತ್ತೆಯಾಗಿದ್ದು,ಅನಾರೋಗ್ಯದಿಂದ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.


ನಿನ್ನೆ ಸಂಜೆ ಪ್ರಭಾಕರ್ ಅವರು ತನ್ನ ಮಗಳನ್ನ ಉಚ್ಚಿಲದ ಶಾಲೆಗೆ ಶಾಲಾ ವಾರ್ಷಿಕೋತ್ಸವಕ್ಕೆಂದು ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಪತ್ನಿ ಮತ್ತು ಮಗನ ಜೊತೆ ಮಗಳ ಶಾಲಾ ವಾರ್ಷಿಕೋತ್ಸವಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು.ಈ ವೇಳೆ ಪತ್ನಿ ಪ್ರಭಾಕರ್ ಅವರನ್ನ ಹುಡುಕಾಡಿದಾಗ ಅವರ ಶವ ಮನೆ ಆವರಣದ ಬಾವಿಯಲ್ಲಿ ಪತ್ತೆಯಾಗಿದೆ.
ಮೃತ ಪ್ರಭಾಕರ ಜೋಗಿಯವರು ನರ ದೌರ್ಬಲ್ಯದ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾಗಿದೆ.ಶುಕ್ರವಾರ ಬೆಳಗ್ಗಿನಿಂದಲೇ ಅವರು ಮಂಕಾಗಿದ್ದು ಆರೋಗ್ಯ ಸಮಸ್ಯೆಯಿಂದಲೇ ಆತ್ಮಹತ್ಯೆಗೈದಿರೋದಾಗಿ ಶಂಕಿಸಲಾಗಿದೆ.
ಪ್ರಭಾಕರ ಜೋಗಿಯವರು ಉಳ್ಳಾಲ ತಾಲೂಕಿನ ಹಲವು ಶಾಲೆಗಳಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.ದೈಹಿಕ ಶಿಕ್ಷಕರ ಸಂಘಟನೆಗಳಲ್ಲಿಯೂ ಅವರು ಸಕ್ರಿಯರಾಗಿದ್ದರು.
ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾಣಿಸಿ ಯುಡಿಆರ್ ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಲಾಡಳಿತವು ಶಿಕ್ಷಣದೊಂದಿಗೆ ಕೈ ಜೋಡಿಸಿದಾಗ ಯಶಸ್ಸು ಸಾಧ್ಯ: ಶಶಿಧರ್ ಡಿ. ಡಿ. ಪಿ. ಐ.

ಉಳ್ಳಾಲ: ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ...

ಬ್ರೇಕಿಂಗ್ ನ್ಯೂಸ್: ಬೆಳ್ತಂಗಡಿ ಪತಿ ಹತ್ಯೆ ಪ್ರಕರಣ – ಕೊಲೆ ಸಾಬೀತಾದರೂ ಪತ್ನಿಗೆ ಶಿಕ್ಷೆ ಇಲ್ಲ: ಕೋರ್ಟ್ ತೀರ್ಪು

ಕೋರ್ಟ್ ತೀರ್ಪಿನ ಪೂರ್ಣ ವಿವರ ಇಲ್ಲಿದೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರು...

ಬಾಂಗ್ಲಾ ಪ್ರಜೆಗೆ ಪಾಸ್‌ಪೋರ್ಟ್ ಮಾಡಲು ಸಹಾಯ: ವಿಟ್ಲ ಪೊಲೀಸ್ ಕಾನ್ಸ್ಟೇಬಲ್ ಬಂಧನ

ಪಾಸ್‌ಪೋರ್ಟ್‌ ವೆರಿಫಿಕೇಶನ್‌ ವೇಳೆ ಸುಳ್ಳು ದಾಖಲೆ ಸೃಷ್ಟಿಸಿದ ಪೊಲೀಸ್ ಸಿಬ್ಬಂದಿಯನ್ನೇ ಬಂಧಿಸಿದ...

ಸಂಪಿಗೆ ಚಚ್೯ನಲ್ಲಿ ಕ್ರಿಸ್ಮಸ್-2025

ಕ್ರಿಸ್ಮಸ್ ನ ಆದಶ೯ ಮತ್ತು ತತ್ವಗಳನ್ನು ಮೈಗೂಡಿಸಿಕೊಳ್ಳಿ ಮೂಡುಬಿದಿರೆ: ಮಂಗಳೂರು ಧಮ೯ಪ್ರಾಂತ್ಯ ಮೂಡುಬಿದಿರೆ...