ಗಂಟಾಲ್ ಕಟ್ಟೆಯಲ್ಲಿ ಅನಧಿಕೃತ ಕಸಾಯಿಖಾನೆ : ಪೊಲೀಸರಿಂದ ದಾಳಿ, 50 ಕೆ. ಜಿ ಮಾಂಸ, 2 ಕಾರು ವಶಕ್ಕೆ

Date:

ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಅಪರಾಧ ವಿಭಾಗದ ಸಿಬ್ಬಂಧಿಗಳಾದ ಪಿ.ಎಸ್.ಐ ಕೃಷ್ಣಪ್ಪ, ಅಖಿಲ್ ಅಹಮ್ಮದ್, ನಾಗರಾಜ್ ರವರು ದಾಳಿ ಮಾಡಿದಾಗ ಅಲ್ಲಿ ದನವನ್ನು ಕಡಿದು ಮಾಂಸವನ್ನು ಮಾಡುತ್ತಿದ್ದುದು ಗಮನಕ್ಕೆ ಬಂದಿರುತ್ತದೆ. ಅಲ್ಲದೆ ಸ್ಥಳದಲ್ಲಿದ್ದ ಕಡಿಯಲು ಕದ್ದು ತಂದಿದ್ದ 3 ದನಗಳನ್ನು ರಕ್ಷಿಸಿ ಗೋಶಾಲೆಗೆ ಬಿಡಲಾಗಿದೆ. ಆರೋಪಿಗಳನ್ನು ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್ ಮತ್ತು ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಿದ್ದು, ಆರೋಪಿಗಳು ಮನೆಯ ಹಿಂಬದಿ ಗುಡ್ಡೆಯಲ್ಲಿ ಪರಾರಿಯಾಗಿರುತ್ತಾರೆ. ಸ್ಥಳದಲ್ಲಿದ್ದ ಮಾಂಸ ಪಡೆಯಲು ಬಂದಿದ್ದ 2 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿರುದ್ಧ ಮೂಡುಬಿದಿರೆ ಅಪರಾಧ ಕ್ರಮಾಂಕ 154/2025 ಕಲಂ 303(2) ಬಿ.ಎನ್.ಎಸ್. ಮತ್ತು 4, 12 ಗೋಹತ್ಯೆ ನಿಷೇಧ ಕಾಯ್ದೆಯಂತೆ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...